ಮಂಗಳೂರು: ವಿಕಲಚೇತನರ ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
ಮಂಗಳೂರು: 2026-27 ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ನವದೆಹಲಿ ವತಿಯಿಂದ ಪ್ರತಿ ವರ್ಷ ಡಿಸೆಂಬರ್ 3 ರಂದು ಆಚರಿಸಲಾಗುವ ವಿಶ್ವ ವಿಕಲಚೇತನರ ದಿನಾಚರಣೆಯ ಸಮಾರಂಭದಲ್ಲಿ ವಿಕಲಚೇತನರ ವಿವಿಧ ಕ್ಷೇತ್ರಗಳಲ್ಲಿ (ಸಬಲೀಕರಣ, ಪುನರ್ವಸತಿ, ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಉದ್ಯೋಗ ಸೃಷ್ಟಿ, ತಡೆರಹಿತ ವಾತಾವರಣ, ಸಂಶೋಧನೆ, ನಾವಿನ್ಯತೆ, ಕ್ರೀಡೆ, ಕಲೆ, ಸಾಹಿತ್ಯ ಮತ್ತು ಇತರೆ ಕ್ಷೇತ್ರ) ರಾಷ್ಟ್ರ ಪ್ರಶಸ್ತಿಗಳನ್ನು ನೀಡಿ ಗೌರವಿಸಲು ಅರ್ಜಿ ಆಹ್ವ್ವಾನಿಸಲಾಗಿದೆ.
ನಗರದ ಕೊಟ್ಟಾರ ದ.ಕ. ಜಿಲ್ಲಾ ಪಂಚಾಯತ್ನಲ್ಲಿರುವ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಅರ್ಜಿಗಳನ್ನು ಪಡೆದು, ಇಂಗ್ಲಿಷ್ನಲ್ಲಿ ಭರ್ತಿ ಮಾಡಿ ಜುಲೈ 25 ರೊಳಗೆ ಕಛೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಕಛೇರಿ (ದೂರವಾಣಿ ಸಂಖ್ಯೆ: 0824-2455999) ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.













