ಮಂಗಳೂರು ವಿಮಾನ ದುರಂತ: ಜಿಲ್ಲಾಡಳಿತ ವತಿಯಿಂದ ಶ್ರದ್ಧಾಂಜಲಿ  ಕಾರ್ಯಕ್ರಮ

Spread the love

ಮಂಗಳೂರು ವಿಮಾನ ದುರಂತ: ಜಿಲ್ಲಾಡಳಿತ ವತಿಯಿಂದ ಶ್ರದ್ಧಾಂಜಲಿ  ಕಾರ್ಯಕ್ರಮ

ಮಂಗಳೂರು: 2010ರಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದ ವಿಮಾನ ದುರಂತ ಘಟನೆಯ ಸ್ಮರಣಾರ್ಥ ಗುರುವಾರ ಜಿಲ್ಲಾಡಳಿತದ ವತಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಸಲಾಯಿತು.

ನಗರದ ಕೂಳೂರು – ತಣ್ಣೀರುಬಾವಿ ರಸ್ತೆಯಲ್ಲಿ ವಿಮಾನ ದುರಂತದಲ್ಲಿ ಅಗಲಿದವರ ಸ್ಮರಣೆಗಾಗಿ ನಿರ್ಮಿಸಿರುವ ಪಾರ್ಕ್‍ನಲ್ಲಿ ಸ್ಮಾರಕಕ್ಕೆ ಪ್ರಭಾರ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಅವರು ಗೌರವ ಸಲ್ಲಿಸಿದರು.

ಮಂಗಳೂರು ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ಪಿಲಿಕುಳ ಪ್ರಾಧಿಕಾರದ ಆಯುಕ್ತ ಅರುಣ್ ಕುಮಾರ್ ಶೆಟ್ಟಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸಾರ್ವಜನಿಕರು ಕೂಡ ಆಗಮಿಸಿ ಸ್ಮಾರಕಕ್ಕೆ ಗೌರವ ಸಲ್ಲಿಸಿದರು.


Spread the love
Subscribe
Notify of

0 Comments
Inline Feedbacks
View all comments