ದುಬೈ ನಿಂದ ಆಗಮಿಸಿ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ಜ್ವರಬಾಧಿತ ವ್ಯಕ್ತಿ ನಾಪತ್ತೆ

Spread the love

ದುಬೈ ನಿಂದ ಆಗಮಿಸಿ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ಜ್ವರಬಾಧಿತ ವ್ಯಕ್ತಿ ನಾಪತ್ತೆ

ಮಂಗಳೂರು: ಜ್ವರಬಾಧಿತನಾಗಿದ್ದ ಹಿನ್ನೆಲೆಯಲ್ಲಿ ನಗರದ ವೆನ್ಲಾಕ್ ಆಸ್ಪತ್ರೆಯ ವಿಶೇಷ ಘಟಕಕ್ಕೆ ದಾಖಲಿಸಲಾಗಿದ್ದ ದುಬೈಯಿಂದ ಆಗಮಿಸಿದ್ದ ಪ್ರಯಾಣಿಕ ಇದೀಗ ಆಸ್ಪತ್ರೆಯಿಂದ ನಾಪತ್ತೆಯಾಗಿರುವುದಾಗಿ ತಿಳಿದುಬಂದಿದೆ.

ದುಬೈನಿಂದ ಆಗಮಿಸಿದ ಪ್ರಯಾಣಿಕರಿಗೆ ಜ್ವರ ಮತ್ತು ಶೀತವಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ, ವಿಮಾನ ನಿಲ್ದಾಣದ ಅಧಿಕಾರಿಗಳು ಅವರನ್ನು ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ಕಳುಹಿಸಿದರು. ಆದರೆ ಎಲ್ಲಾ ಪರೀಕ್ಷೆಗಳಿಗೆ ಒಳಗಾದ ನಂತರ, ಅವರು ಕರೋನಾ ವೈರಸ್ ಇಲ್ಲ ಎನ್ನುವುದು ಧೃಡಪಟ್ಟಿದೆ.

ಎಲ್ಲೆಡೆ ಕೊರೋನ ಸೋಂಕು ಕುರಿತು ಭಯ ಇರುವ ಹಿನ್ನೆಲೆಯಲ್ಲಿ ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಎಲ್ಲ ಪ್ರಯಾಣಿಕರನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ. ಅದರಂತೆ ರವಿವಾರ ದುಬೈನಿಂದ ಆಗಮಿಸಿದ ಪ್ರಯಾಣಿಕನೋರ್ವನಲ್ಲಿ ಜ್ವರದ ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಆತನನ್ನು ವೆನ್ಲಾಕ್ ಆಸ್ಪತ್ರೆಯ ವಿಶೇಷ ಘಟಕಕ್ಕೆ ದಾಖಲಿಸಿದ್ದು ಆದರೆ ಜ್ವರಬಾಧಿತ ವ್ಯಕ್ತಿಯು ಆಸ್ಪತ್ರೆಯಿಂದ ಬಲವಂತವಾಗಿ ‘ಹೊರ’ ಹೋಗಿರುವುದಾಗಿ ಹೇಳಲಾಗಿದೆ.

 


Spread the love