ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ : ಅಕ್ರಮ ಗಾಂಜಾ ಪತ್ತೆ ಆರೋಪಿ ಸೆರೆ

Spread the love

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ : ಅಕ್ರಮ ಗಾಂಜಾ ಪತ್ತೆ ಆರೋಪಿ ಸೆರೆ

ಮಂಗಳೂರು: ಮಂಗಳೂರು ನಗರಕ್ಕೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಬೃಹತ್ ಪ್ರಮಾಣದಲ್ಲಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದವನನ್ನು ಗಾಂಜಾ ಸಮೇತ ವಶಕ್ಕೆ ಪಡೆದುಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.

ibrahim-ganja-peddling-20161128

ಆಂಧ್ರಪ್ರದೇಶದ ವಿಶಾಖಪಟ್ಟಣದ ಬಳಿಯಿಂದ ಬೃಹತ್ ಪ್ರಮಾಣದಲ್ಲಿ ಮಂಗಳೂರು ನಗರಕ್ಕೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಸಿಸಿಬಿ ಪೊಲೀಸರು ಪಂಪ್ ವೆಲ್ ವೃತ್ತದ ಬಳಿಯಿರುವ ಹೊಟೇಲ್ ಪದ್ಮಶ್ರೀ ಮುಂಭಾಗದಲ್ಲಿ ಗಾಂಜಾವನ್ನು ಪುತ್ತೂರು/ಸುಳ್ಯ ಕಡೆಗೆ ಮಾರಾಟ ಮಾಡಲು ತೆರಳುವ ಸಂದರ್ಭದಲ್ಲಿ ಇಬ್ರಾಹೀಂ, ಪ್ರಾಯ(38), ತಂದೆ: ಉಮ್ಮರ್, ವಾಸ: ಕುಂಬಳೆ, ಕಾಸರಗೋಡು ಜಿಲ್ಲೆ, ಕೇರಳ ರಾಜ್ಯ ಎಂಬಾತನನ್ನು ವಶಕ್ಕೆ ಪಡೆದುಕೊಂಡು ಆತನಿಂದ ಸುಮಾರು ಒಟ್ಟು 8 ಕೆಜಿ ಗಾಂಜಾ, ಮೊಬೈಲ್ ಫೋನ್ ಹಾಗೂ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಗಾಂಜಾದ ಆಂದಾಜು ಮೌಲ್ಯ 2,01,510/- ಆಗಿರುತ್ತದೆ.

ಈ ಗಾಂಜಾವನ್ನು ಆರೋಪಿಯು ವಿಶಾಖಪಟ್ಟಣದಿಂದ ಖರೀದಿ ಮಾಡಿ ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಮಾರಾಟ ಮಾಡಲು ತಂದಿರುವುದಾಗಿದೆ. ಈತನು ಹಿಂದೆ 2014 ನೇ ಇಸವಿಯಲ್ಲಿ ಈತನು ಇದೇ ರೀತಿಯಲ್ಲಿ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಸಮಯ ಈತನನ್ನು ದಸ್ತಗಿರಿ ಮಾಡಲಾಗಿದ್ದು, ಈ ಪ್ರಕರಣವು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದು, ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದನು. ನ್ಯಾಯಾಲಯವು ಈತನ ವಿರುದ್ಧ ವಾರಂಟ್ ಹೊರಡಿಸಿರುತ್ತದೆ. ಆರೋಪಿಯನ್ನು ಹಾಗೂ ವಶಪಡಿಸಿಕೊಂಡ ಗಾಂಜಾವನ್ನು ಮುಂದಿನ ಕ್ರಮಕ್ಕಾಗಿ ಕಂಕನಾಡಿ ನಗರ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

ಸಿಸಿಬಿ ಘಟಕದ ಇನ್ಸ್ ಪೆಕ್ಟರ್ ಸುನೀಲ್ ವೈ ನಾಯ್ಕ್ ಮತ್ತು ಪಿ.ಎಸ್.ಐ ಶ್ಯಾಮ್ ಸುಂದರ್ ಹಾಗೂ ಸಿಬ್ಬಂದಿಗಳು ಪತ್ತೆಕಾರ್ಯದಲ್ಲಿ ಭಾಗವಹಿಸಿದ್ದರು.


Spread the love