ಮಂಗಳೂರು: 25ನೇ ವರ್ಷದ ಮಣಿಪಾಲ ಆರೋಗ್ಯ ಕಾರ್ಡ್ ನೋಂದಣಿ ಆರಂಭ

Spread the love

ಮಂಗಳೂರು: 25ನೇ ವರ್ಷದ ಮಣಿಪಾಲ ಆರೋಗ್ಯ ಕಾರ್ಡ್ ನೋಂದಣಿ ಆರಂಭ

ಮಂಗಳೂರು: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ ) ಮಣಿಪಾಲವು ಕರ್ನಾಟಕ ಮತ್ತು ನೆರೆಯ ರಾಜ್ಯಗಳಾದ್ಯಂತ ಲಕ್ಷಾಂತರ ಕುಟುಂಬಗಳಿಗೆ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆಯನ್ನು ಒದಗಿಸುತ್ತಿರುವ ಮಣಿಪಾಲ ಆರೋಗ್ಯ ಕಾರ್ಡ್ 2025 ರ ನೋಂದಣಿ ಪ್ರಾರಂಭಿಸಿರುವುದಾಗಿ, ಮಾಹೆ ಮಂಗಳೂರು ಕ್ಯಾಂಪಸ್‌ನ ಪ್ರೊ ವೈಸ್ ಚಾನ್ಸಲರ್ ಡಾ. ದಿಲೀಪ್ ಜಿ ನಾÊಕ್ ರವರು ಘೋಷಿಸಿದ್ದಾರೆ. ಈ ಮೂಲಕ ಗ್ರಾಮೀಣ ಭಾರತಕ್ಕೆ ಆರೋಗ್ಯ ಸೇವೆ ಲಭ್ಯವಾಗುವಂತೆ ಮಾಡುವ ಧ್ಯೇಯವನ್ನು ಹೊಂದಿದ್ದ ಮಣಿಪಾಲ್ ಸಂಸ್ಥೆಯ ಸಂಸ್ಥಾಪಕ ಡಾ. ಟಿ.ಎಂ.ಎ. ಪೈ ಅವರ ದೂರದೃಷ್ಟಿಯ ನಾಯಕತ್ವವನ್ನು ನೆನಪಿಸಿದರು. “2000 ನೇ ವರ್ಷದಲ್ಲಿ ಪ್ರಾರಂಭಿಸಲಾದ ಮಣಿಪಾಲ ಆರೋಗ್ಯ ಕಾರ್ಡ್ ಯೋಜನೆಯು ಈಗ ರಜತ ಮಹೋತ್ಸವದ ಮೈಲಿಗಲ್ಲನ್ನು ತಲುಪಿದೆ. 24 ವರ್ಷಗಳಲ್ಲಿ, ಲಕ್ಷಾಂತರ ಫಲಾನುಭವಿಗಳಿಗೆ ವರದಾನವಾಗಿದೆ ಎಂದಿದ್ದಾರೆ”.

2000 ನೇ ಇಸವಿಯಲ್ಲಿ, 10500 ಸದಸ್ಯರು ಮಣಿಪಾಲ ಆರೋಗ್ಯಕಾರ್ಡ್ ಯೋಜನೆಯಡಿ ನೋಂದಣಿ ಮಾಡಿದ್ದರು. ಕಳೆದ ಹಣಕಾಸು ವರ್ಷದಲ್ಲಿ 3.68 ಲಕ್ಷ ಕುಟುಂಬಗಳು ಈ ಯೋಜನೆಗಳ ಅಡಿಯಲ್ಲಿ ನೋಂದಾಯಿಸಿಕೊAಡಿದ್ದಾರೆ. ಕರ್ನಾಟಕ ಮತ್ತು ನೆರೆಯ ರಾಜ್ಯಗಳಾದ್ಯಂತ ಲಕ್ಷಾಂತರ ಕುಟುಂಬಗಳಿಗೆ ಪ್ರಯೋಜನವನ್ನು ನೀಡುತ್ತಿದೆ” ಎಂದು ತಿಳಿಸಿದರು

ಮಣಿಪಾಲ್ ಹೆಲ್ತ್ ಎಂಟರ್‌ಪ್ರೆöÊಸಸ್ ಮತ್ತು ಮಂಗಳೂರಿನ ವೈದ್ಯಕೀಯ ಕಾಲೇಜು ಆಸ್ಪತ್ರೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ. ಸಘೀರ್ ಸಿದ್ದಿಕಿ ಮಾತನಾಡಿ “ಈ ಯೋಜನೆಯಡಿಯಲ್ಲಿ ಒಂದು ವರ್ಷ ಮತ್ತು ಎರಡು ವರ್ಷಗಳ ಸದಸ್ಯತ್ವ ಆಯ್ಕೆಗಳನ್ನು ನೀಡುತ್ತಿದ್ದೇವೆ. ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ, ಯಾರಾದರೂ ಸದಸ್ಯರಾಗಬಹುದು ಮತ್ತು ಪ್ರಯೋಜನಗಳನ್ನು ಪಡೆಯಬಹುದು. “ಸಂಪೂರ್ಣ ಕುಟುಂಬಕ್ಕಾಗಿ ಶ್ರೇಷ್ಠ ಮೌಲ್ಯ ಮತ್ತು ವಿಶ್ವಾಸಾರ್ಹ ಸೇವೆ” ಎಂಬುದು ಮಣಿಪಾಲ್ ಆರೋಗ್ಯಕಾರ್ಡ್ ನ ದ್ಯೇಯ ವಾಕ್ಯ. ಈ ಯೋಜನೆಯು ಒಂದು ವರ್ಷ ಮತ್ತು ಎರಡು ವರ್ಷದ ಅವಧಿಯನ್ನು ಹೊಂದಿದ್ದು ಈ ಆರೋಗ್ಯ ಕಾರ್ಡ್ ಹೊಂದಿರುವವರು ಮಣಿಪಾಲ್ ಸಮೂಹ ಆಸ್ಪತ್ರೆಗಳಾದ ಕೆ.ಎಂ.ಸಿ. ಆಸ್ಪತ್ರೆ ಅತ್ತಾವರ, ಕೆ.ಎಂ.ಸಿ. ಆಸ್ಪತ್ರೆ ಡಾ. ಬಿ. ಆರ್. ಅಂಬೇಡ್ಕರ್ ವೃತ್ತ್ತ, ದುರ್ಗಾ ಸಂಜೀವನಿ ಮಣಿಪಾಲ್ ಆಸ್ಪತ್ರೆ ಕಟೀಲು, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಡಾ. ಟಿಎಂಎ ಪೈ ಆಸ್ಪತ್ರೆ ಉಡುಪಿ, ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆ ಕಾರ್ಕಳ, ಹಾಗೂ ಮಣಿಪಾಲ್ ಆಸ್ಪತ್ರೆ ಗೋವಾಗಳಲ್ಲಿ ರಿಯಾಯಿತಿ ಸೌಲಭ್ಯಗಳನ್ನು ಪಡೆಯಬಹುದು. ಈ ಕಾರ್ಡ್ನ ಸೌಲಭ್ಯಗಳು ದಂತ ಚಿಕಿತ್ಸೆಗೂ ಅನ್ವಯವಾಗಲಿದ್ದು ಕಾರ್ಡುದಾರರು ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸಾಯನ್ಸಸ್ ಮಂಗಳೂರು ಮತ್ತು ಮಣಿಪಾಲದಲ್ಲಿ ರಿಯಾಯಿತಿ ಸೌಲಭ್ಯಗಳನ್ನು ಪಡೆಯಬಹುದು” ಎಂದು ತಿಳಿಸಿದರು.

ದುರ್ಗಾ ಸಂಜೀವನಿ ಮಣಿಪಾಲ್ ಆಸ್ಪತ್ರೆ, ಕಟೀಲು ಇಲ್ಲಿನ ಮುಖ್ಯ ಆಡಳಿತಾಧಿಕಾರಿಯಾಗಿರುವ ಡಾ. ಶಿವಾನಂದ ಪ್ರಭು ಕಾರ್ಡಿನ ಸದಸ್ಯತ್ವದ ಬಗ್ಗೆ ಮಾತನಾಡಿ “ಒಂದು ವರ್ಷದ ಯೋಜನೆಯಲ್ಲಿ ಕಾರ್ಡಿನ ಸದಸ್ಯತ್ವವು ಒಬ್ಬರಿಗೆ ರೂ. 350/ – ಕೌಟಂಬಿಕ ಯೋಜನೆ ಅಂದರೆ ಕಾರ್ಡುದಾರ, ಅವರ ಸಂಗಾತಿ ಮತ್ತು 25 ವರ್ಷದ ಒಳಗಿನ ಮದುವೆಯಾಗದ ಮಕ್ಕಳಿಗೆ ರೂ. 700/- ಮತ್ತು ಕುಟುಂಬ ಪ್ಲಸ್ ಯೋಜನೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳು ಮತ್ತು 4 ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ) ರೂ. 900/- ಆಗಿರುತ್ತದೆ. ಎರಡು ವರ್ಷದ ಯೋಜನೆಯಲ್ಲಿ ಒಬ್ಬರಿಗೆ ರೂ. 600/-, ಕುಟುಂಬಕ್ಕೆ ರೂ. 950/- ಮತ್ತು ಕೌಟಂಬಿಕ ಪ್ಲಸ್ ಯೋಜನೆಗೆ ರೂ. 1100/- ಆಗಿರುತ್ತದೆ. ಈ ರಚನಾತ್ಮಕ ವಿಧಾನವು ವ್ಯಕ್ತಿಗಳಿಗೆ ಮತ್ತು ಕುಟುಂಬಗಳಿಗೆ ಸಮಗ್ರ ಆರೋಗ್ಯ ಸೇವೆ ಸುಲಭವಾಗಿ ಲಭ್ಯವಾಗುವಂತೆ ಮತ್ತು ಕೈಗೆಟುಕುವಂತೆ ಮಾಡುತ್ತದೆ” ಎಂದು ವಿವರಿಸಿದರು.

ಕೆ.ಎಂ.ಸಿ. ಆಸ್ಪತ್ರೆ, ಅತ್ತಾವರದ ಉಪ ವೈದ್ಯಕೀಯ ಅಧೀಕ್ಷಕರಾದ ಡಾ. ದೀಪಕ್ ಮಡಿ ಮಣಿಪಾಲ ಆರೋಗ್ಯ ಕಾರ್ಡ್ನ ಪ್ರಯೋಜನಗಳನ್ನು ವಿವರಿಸುತ್ತಾ, “ಮಣಿಪಾಲ ಆರೋಗ್ಯ ಕಾರ್ಡ್ ಹೊಂದಿರುವವರು ಎಲ್ಲಾ ತಜ್ಞ ಅಥವಾ ಸೂಪರ್ ಸ್ಪೆಷಲಿಸ್ಟ್ ವೈದ್ಯರ ಹೊರರೋಗಿ ಸಮಾಲೋಚನೆ ಮೇಲೆ 50% ದ ವರೆಗೆ ರಿಯಾಯಿತಿ, ಪ್ರಯೋಗಾಲಯ ಪರೀಕ್ಷೆಗಳ ಮೇಲೆ 20% ದ ವರೆಗೆ ರಿಯಾಯಿತಿ, ರೇಡಿಯಾಲಜಿ ಪರೀಕ್ಷೆಗಳಾದ ಸಿಟಿ. ಎಮ್.ಆರ್.ಐ, ಅಲ್ಟಾç ಸೌಂಡ್, ಎಕ್ಸ್ರೇ ಹಾಗೂ ಇನ್ನಿತರ ಪರೀಕ್ಷೆಗಳ ಮೇಲೆ 20% ದ ವರೆಗೆ ರಿಯಾಯಿತಿ, ಆಸ್ಪತ್ರೆಯ ಔಷಧಾಲಯದಿಂದ ಖರೀದಿಸಿದ ಔಷಧಿಗಳ ಮೇಲೆ 10% ದÀ ವರೆಗೆ ರಿಯಾಯಿತಿಯು ಇರುತ್ತದೆ. ಒಳರೋಗಿಯಾಗಿ ದಾಖಲಾದಲ್ಲಿ (ಕನ್ಸುö್ಯಮೇಬಲ್ಸ್ ಮತ್ತು ಪ್ಯಾಕೇಜ್ಗಳನ್ನು ಹೊರತುಪಡಿಸಿ) ಬಿಲ್ಲಿನಲ್ಲಿ 25% ದ ವರೆಗೆ ರಿಯಾಯಿತಿ ಸಿಗುತ್ತದೆ. ಈ ಯೋಜನೆಗೆ ಸೇರಲು ವಯಸ್ಸಿನ ಮಿತಿಯಿಲ್ಲದ ಕಾರಣ, ಈ ಯೋಜನೆಯು ಹಿರಿಯ ನಾಗರಿಕರಿಗೆ ವರದಾನವಾಗಲಿದ್ದು ಕೈಗೆಟಕುವಿಕೆಯೊಂದಿಗೆ ಗುಣಮಟ್ಟದ ಆರೋಗ್ಯವನ್ನು ಪಡೆಯಲು ಸಹಾಯ ಮಾಡಿದೆ.” ಎಂದು ತಿಳಿಸಿದರು.

ಶ್ರೀ ರಾಕೇಶ್, ಸೀನಿಯರ್ ಮ್ಯಾನೇಜರ್, ಮಾರುಕಟ್ಟೆ ವಿಭಾಗ ಇವರು ಮಾತನಾಡಿ “ಕಳೆದ 24 ವರ್ಷಗಳಲ್ಲಿ, ಸಾಮಾಜಿಕ ಕಾಳಜಿಯೊಂದಿಗೆ ನಾವು ಲಕ್ಷಾಂತರ ಜನರಿಗೆ ಉತ್ತಮ ಗುಣಮಟ್ಟದ ಆರೋಗ್ಯ ಸೇವೆಗಳನ್ನು ರಿಯಾಯಿತಿ ದರದಲ್ಲಿ ಒದಗಿಸುತ್ತಿದ್ದೇವೆ ಮತ್ತು ವರ್ಷದಿಂದ ವರ್ಷಕ್ಕೆ ಸದಸ್ಯರ ನೋಂದಣಿ ಹೆಚ್ಚಾಗುತ್ತಿರುವುದು ಮಣಿಪಾಲ ಆರೋಗ್ಯಕಾರ್ಡ್ನ ಜನಪ್ರಿಯತೆಯನ್ನು ತೋರಿಸುತ್ತದೆೆ. ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಣಿಯನ್ನು ಉತ್ತೇಜಿಸುವಲ್ಲಿ ಮಾಧ್ಯಮಗಳ ಬೆಂಬಲವು ಅಪಾರವಾಗಿದ್ದು ವ್ಯಾಪಕ ಜನರನ್ನು ತಲುಪುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಸಾರ್ವಜನಿಕರು ಮಣಿಪಾಲ್ ಹೆಲ್ತ್ ಕಾರ್ಡ್ ನೊಂದಣಿಯನ್ನು ಕೆಎಂಸಿ ಆಸ್ಪತ್ರೆ ಅತ್ತಾವರ, ಕೆಎಂಸಿ ಆಸ್ಪತ್ರೆ ಡಾ. ಬಿ.ಆರ್. ಅಂಬೇಡ್ಕರ್ ವೃತ್ತ ಮತ್ತು ದುರ್ಗಾ ಸಂಜೀವನಿ ಮಣಿಪಾಲ ಆಸ್ಪತ್ರೆ ಕಟೀಲಿನಲ್ಲಿರುವ ಕೌಂಟರ್‌ಗಳಲ್ಲಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉತ್ತರ ಕೇರಳದಾದ್ಯಂತ ಇರುವ ನಮ್ಮ ಅಧಿಕೃತ ಪ್ರತಿನಿಧಿಗಳ ಮೂಲಕ ನೋಂದಾಯಿಸಿಕೊಳ್ಳಬಹುದು” ಎಂದು ತಿಳಿಸಿದರು.

ಮಣಿಪಾಲ ಆರೋಗ್ಯ ಕಾರ್ಡಿನ ಬಗ್ಗೆ ಹಾಗೂ ಜಿಲ್ಲೆಯಾದ್ಯಂತ ಇರುವ ನಮ್ಮ ಅಧಿಕೃತ ಪ್ರತಿನಿಧಿಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ 0824-2285214, 7022078002 ಗೆ ಕರೆ ಮಾಡಬಹುದು.

ನಿಮ್ಮ ಮಣಿಪಾಲ ಆರೋಗ್ಯ ಕಾರ್ಡಿನ ಬಗ್ಗೆ ತಿಳಿಯಲು ನಿಮ್ಮ ನೊಂದಾಯಿತ ಮೊಬೈಲ್ ಸಂಖ್ಯೆಯಿAದ 88675 79797 ಗೆ ಮಿಸ್ ಕಾಲ್ ನೀಡಿರಿ.

ಪತ್ರಿಕಾ ಮತ್ತು ಮಾಧ್ಯಮ ಸದಸ್ಯರಿಗೆ ಉತ್ತಮ ಆರೋಗ್ಯವನ್ನು ಹಾರೈಸುವ ಸೂಚಕವಾಗಿ ನಾಯಕತ್ವ ತಂಡವು ಮಾಧ್ಯಮ ಪ್ರತಿನಿಧಿಗಳಿಗೆ ಮಣಿಪಾಲ ಆರೋಗ್ಯ ಕಾರ್ಡ್ ಅನ್ನು ಹಸ್ತಾಂತರಿಸಿದರು.


Spread the love
Subscribe
Notify of

0 Comments
Inline Feedbacks
View all comments