ಮಟ್ಕಾ ದಂಧೆ : ಓರ್ವನ ಸೆರೆ

Spread the love

ಮಟ್ಕಾ ದಂಧೆ : ಓರ್ವನ ಸೆರೆ

ಮಂಗಳೂರು: ನಗರದ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯ ಫಳ್ನೀರ್ ಪರಿಸರದಲ್ಲಿ ಅಕ್ರಮವಾಗಿ ಮಟ್ಕಾ ದಂಧೆ ನಡೆಸುತ್ತಿದ್ದವನನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿರುತ್ತಾರೆ.

ದಿನಾಂಕ: 02-01-2019 ರಂದು ಮಂಗಳೂರು ನಗರದ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯ ಫಳ್ನೀರ್ ಯಶ್ ರಾಜ್ ಬಾರ್ ಪರಿಸರದಲ್ಲಿ ಅಕ್ರಮವಾಗಿ ಮಟ್ಕಾ ದಂಧೆಯನ್ನು ನಡೆಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಟ್ಕಾ ದಂಧೆಯಲ್ಲಿ ನಿರತನಾಗಿದ್ದ ಬಂಟ್ವಾಳ ಸಿದ್ದಕಟ್ಟೆ ನಿವಾಸಿ ಪ್ರಶಾಂತ್ (28) ಎಂಬಾತನನ್ನು ವಶಕ್ಕೆ ಪಡೆದುಕೊಂಡು ಆತನಿಂದ ಮಟ್ಕಾ ಆಟಕ್ಕೆ ಬಳಸಿದ ರೂ. 15,000/-ನಗದು, ಮಟ್ಕಾ ನಂಬ್ರ ಬರೆದ ಚೀಟಿಗಳು, ಮೊಬೈಲ್ ಫೋನ್ ನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ಹಾಗೂ ವಶಪಡಿಸಿಕೊಂಡ ಸೊತ್ತನ್ನು ಮುಂದಿನ ಕ್ರಮಕ್ಕಾಗಿ ಮಂಗಳೂರು ಉತ್ತರ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿರುತ್ತದೆ.

ಈ ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಇನ್ಸ್ ಪೆಕ್ಟರ್ ಶಾಂತಾರಾಮ, ಪಿಎಸ್ಐಯವರಾದ ಶ್ಯಾಮ್ ಸುಂದರ್, ಹೆಚ್ ಎಂ, ಕಬ್ಬಾಳ್ ರಾಜ್, ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.


Spread the love