ಮಣಿಪಾಲ ಆಸ್ಪತ್ರೆಯಲ್ಲಿ 35 ವರ್ಷದ ಕೇರಳದ ಯುವಕ ಕೊರೋನ ಸೋಂಕಿಗೆ ಬಲಿ

Spread the love

ಮಣಿಪಾಲ ಆಸ್ಪತ್ರೆಯಲ್ಲಿ 35 ವರ್ಷದ ಕೇರಳದ ಯುವಕ ಕೊರೋನ ಸೋಂಕಿಗೆ ಬಲಿ

ಮಣಿಪಾಲ: ಮಣಿಪಾಲದ ಕೆ ಎಮ್ ಸಿ ಆಸ್ಪತ್ರೆಯಲ್ಲಿ ಕಿಡ್ನಿ ಸಮಸ್ಯೆಗೆ ಚಿಕಿತ್ಸೆ ಪಡೆಯುತ್ತಿದ್ದ ಕೇರಳ ಮೂಲದ 35 ವರ್ಷದ ಯುವಕ ಸೋಮವಾರ ರಾತ್ರಿ ಮೃತಪಟ್ಟಿದ್ದು ಆತನಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಕಳೆದ 15 ದಿನಗಳಿಂದ ಕಿಡ್ನಿ ತೊಂದರೆಗಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಕೇರಳದ ಕಣ್ಣೂರು ಜಿಲ್ಲೆಯ 35ರ ಹರೆಯದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು , ಆ ಬಳಿಕ ನಡೆಸಿದ ಪರೀಕ್ಷೆಯಲ್ಲಿ ಆತನಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.

ಯುವಕನ ಅಂತ್ಯಸಂಸ್ಕಾರವನ್ನು ಕೋವಿಡ್ ನಿಯಮಾವಳಿಯಂತೆ ಉಡುಪಿಯಲ್ಲೇ ನಡೆಸಲು ಸಿದ್ಧತೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.


Spread the love