ಮಣಿಪಾಲ ರಾ. ಹೆದ್ದಾರಿ ಸಮಸ್ಯೆ; ಕೇಂದ್ರ-ರಾಜ್ಯ ಸರ್ಕಾರಗಳ ಕೊಳಕು ರಾಜಕೀಯಕ್ಕೆ ಮಗು ಬಲಿ!

Spread the love

ಮಣಿಪಾಲ ರಾ. ಹೆದ್ದಾರಿ ಸಮಸ್ಯೆ; ಕೇಂದ್ರ-ರಾಜ್ಯ ಸರ್ಕಾರಗಳ ಕೊಳಕು ರಾಜಕೀಯಕ್ಕೆ ಮಗು ಬಲಿ!

ಉಡುಪಿ: ಮಲ್ಪೆ-ತೀರ್ಥಹಳ್ಳಿ ರಾಷ್ತ್ರೀಯ ಹೆದ್ದಾರಿ(169A) ಯು ಮಣಿಪಾಲದಿಂದ ಪರ್ಕಳವರೆಗೆ ಸಂಪೂರ್ಣವಾಗಿ ಹದಗೆಟ್ಟಿದ್ದು ಅದನ್ನು ಸರಿಪಡಿಸುವಂತೆ ಸಾರ್ವಜನಿಕರು ಒಂದು ವರ್ಷದಿಂದ ಪ್ರತಿಭಟನೆಗಳನ್ನು ನಡೆಸುತ್ತಾ ಬಂದಿದ್ದು ರಾಜ್ಯ ಹಾಗೂ ಕೇಂದ್ರ ಸರಕಾರಗಳು ಪರಸ್ಪರ ಕೆಸರೆರೆಚಾಟದಲ್ಲೇ ಕಾಲ ಕಳೆಯುತ್ತಿದ್ದು ಈ ನಡುವೆ ಅದೇ ರಸ್ತೆಯಲ್ಲಿ ಸೋಮವಾರ ನಡೆದ ಅಫಘಾತದಲ್ಲಿ   ಒಂದು ವರ್ಷದ ಮಗು ಸಾವನ್ನಪ್ಪಿದೆ.

ಮಣಿಪಾಲದಿಂದ ಹಿರಿಯಡ್ಕಗೆ ದಂಪತಿ ಬೈಕ್‍ನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ. ರಸ್ತೆಯಲ್ಲಿದ್ದ ಗುಂಡಿಗಳನ್ನು ತಪ್ಪಿಸಲು ಹೋದಾಗ ಬೈಕ್‍ನಲ್ಲಿದ್ದ ಮಗು ಕೆಳಕ್ಕೆ ಎಸೆಯಲ್ಪಟ್ಟಿದ್ದು. ಈ ಸಂದರ್ಭದಲ್ಲಿ ತೀವ್ರವಾಗಿ ಗಾಯಗೊಂಡ ಒಂದು ವರ್ಷದ ಚಿರಾಗ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

‘ರಾಜ್ಯ ಹೆದ್ದಾರಿಯಾಗಿದ್ದ ಈ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜಗೇರಿಸಿ ಹಲವು ವರ್ಷ ಆಗಿದೆ. ಆದರೆ ಅಭಿವೃದ್ಧಿ ಮಾತ್ರ ಆಗಿಲ್ಲ. ಅಟೊ ಚಾಲಕರು ಹಾಗೂ ಮಣಿಪಾಲ ವಿಶ್ವವಿದ್ಯಾಲಯದಲ್ಲಿ ಓದುತ್ತಿರುವ ಸಾವಿರಾರು ವಿದ್ಯಾರ್ಥಿಗಳು ಪ್ರತಿ ನಿತ್ಯ ಇಲ್ಲಿ ನರಕ ಯಾತನೆ ಅನುಭವಿಸಬೇಕಾಗಿದೆ. ಮಳೆಗಾಲದಲ್ಲಂತೂ ಈ ರಸ್ತೆ ಇನ್ನಷ್ಟು ಅಪಾಯಕಾರಿಯಾಗಿ ಪರಿಣಮಿಸುತ್ತದೆ. ಈ ಕೂಡಲೇ ರಸ್ತೆ ರಿಪೇರಿಗೆ ಕ್ರಮ ಕೈಗೊಳ್ಳಬೇಕು’ಎಂದು ಹಲವಾರು ಸಂಘಸಂಸ್ಥೆಗಳು ಪ್ರತಿಭಟನೆ ಮನವಿಯನ್ನು ಸಲ್ಲಿಸಿದರೂ ಕೂಡ ಈ ಭಾಗದ ಸಂಸದೆ ಶೋಭಾ ಕರಂದ್ಲಾಜೆ ಒಮ್ಮೆಯೂ ಸಹ ಕಣ್ಣೆತ್ತಿ ನೋಡುವ ಕೆಲಸ ಮಾಡಿಲ್ಲ ಬದಲಾಗಿ ಹಿಂದಿನ ಯುಪಿಎ ಸರಕಾರದ ವಿರುದ್ದ ಹೇಳಿಕೆಗಳನ್ನು ನೀಡಿ ಕೈತೊಳೆದುಕೊಂಡಿದ್ದಾರೆ.

ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಕೇವಲ ಮಾಧ್ಯಮ ಹೇಳಿಕೆಗಳನ್ನು ನೀಡಿ ರಾಷ್ಟ್ರೀಯ ಹೆದ್ದಾರಿಯಾಗಿರುವುದರಿಂದ ಕೇಂದ್ರ ಸರ್ಕಾರದ ಅಡಳಿತಕ್ಕೆ ಒಳಪಟ್ಟಿದ್ದು. ರಸ್ತೆಯ ಎರಡೂ ಬದಿ ಇರುವ ಅಂಗಡಿಗಳನ್ನು ತೆರವು ಮಾಡಿಸಲು ಕೇಂದ್ರ ಸರ್ಕಾರ ಪರಿಹಾರ ಕೊಡಬೇಕು. ಆ ಮೊತ್ತವನ್ನು ಡೆಪಾಸಿಟ್ ಮಾಡಬೇಕು. ಆ ನಂತರ ರಾಜ್ಯ ಸರ್ಕಾರ ತೆರವು ಮಾಡಿಸಿಕೊಡುತ್ತದೆ ಎಂದು ಹೇಳಿ ಸುಮ್ಮನಿದ್ದು, ಒಟ್ಟಾರೆಯಾಗಿ   ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕೊಳಕು ರಾಜಕೀಯದಿಂದ ಅಮಾಯಕ ಮಗುವೊಂದು ಬಲಿಯಾದಂತಾಗಿದೆ.  ಸರ್ಕಾರ ಹಾಗೂ ಜನಪ್ರತಿನಿಧಿಗಳ ಬೇಜವಾಬ್ದಾರಿಯಿಂದ ಈ ಸಾವು ಸಂಭವಿಸಿದೆ. ಇದೊಂದು ಸರ್ಕಾರದ ಕೊಲೆ ಎಂದು ಸಾರ್ವಜನಿಕರು ಗಂಭೀರ ಆರೋಪ ಮಾಡಿದ್ದಾರೆ. ಸ್ಥಳಕ್ಕೆ ಮಣಿಪಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ರಸ್ತೆಯ  ಅವ್ಯವಸ್ಥೆಯನ್ನು ಸರಿಪಡಿಸುವಂತೆ ಆಗ್ರಹಿಸಿ ಉಡುಪಿಯ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಮೂರ್ನಾಲ್ಕು ಬಾರಿ ವಿಭಿನ್ನ ರೀತಿಯಲ್ಲಿ ಪ್ರತಿಭಟಿಸಿ ಸರ್ಕಾರ ಹಾಗೂ ಜನಪ್ರತಿನಿಧಿಗಳ ಗಮನ ಸೆಳೆದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ.


Spread the love

3 Comments

Comments are closed.