ಮತದಾನ ಜಾಗೃತಿ ಓಟ ಮತ್ತು ಪ್ರತಿಜ್ಞಾ ಸ್ವೀಕಾರ 

Spread the love

ಮತದಾನ ಜಾಗೃತಿ ಓಟ ಮತ್ತು ಪ್ರತಿಜ್ಞಾ ಸ್ವೀಕಾರ 

ಮಂಗಳೂರು :ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ಗ್ರಾಮಾಂತರ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ಗ್ರಾಮಾಂತರ ವ್ಯಾಪ್ತಿಯ ಮತದಾನ ಜಾಗೃತಿ ಓಟ ಮತ್ತು ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ ಮಾರ್ಚ್ 2 ರಂದು ಮಂಗಳಾ ಕ್ರೀಡಾಂಗಣದಲ್ಲಿ ಜರುಗಿತು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಎಂ.ಆರ್ ರವಿ ಮತದಾನ ಜಾಗೃತಿ ಓಟಕ್ಕೆ ಚಾಲನೆ ನೀಡಿ ಮಾತನಾಡುತ್ತ ‡ನಿಮ್ಮ ಮತ ನಿಮ್ಮ ಹಕ್ಕು” ಸುಭದ್ರ ಪ್ರಜಾಪ್ರಭುತ್ವಕ್ಕಾಗಿ ಸರ್ವರೂ ಮತದಾನದಲ್ಲಿ ಪಾಲ್ಗೊಳಿ ಎಂದು ತಿಳಿಸಿದರು. ಪ್ರಜಾಪ್ರಭುತ್ವವನ್ನು ಬಲಪಡಿಸಲು ಯುವ ಜನತೆ ಚುನಾವಣೆ ಪ್ರಕ್ರಿಯೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಹಾಗೂ ಇತರಿಗೂ ಅರಿವು ಮೂಡಿಸಬೇಕು ಎಂದರು. ಮಹಿಳೆಯರ ಮೂಲಕವೇ ಮತದಾನ ಜಾಗೃತಿ ಆರಂಭಗೊಂಡು ಗ್ರಾಮ, ಗ್ರಾಮಕ್ಕೆ ಈ ಮಾಹಿತಿ ತಲುಪಿ ಪ್ರತಿಯೊಬ್ಬ ಮತದಾರರು ಮತ ಚಲಾಯಿಸುವಂತೆ ಪ್ರೇರಣೆ ನೀಡಬೇಕೆಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಸುಂದರಪೂಜಾರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಪ್ರದೀಪ್ ಡಿ ಸೋಜ, ನಿರೂಪಣಾಧಿಕಾರಿ ಉಸ್ಮಾನ್ ಎ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಸುಧಾಕರ್, ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೋಭ ಪಿ., ಸಹಾಯಕ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ಲಿಲ್ಲಿ ಪಾಯಸ್, ಸ್ರೀಶಕ್ತಿ ಬ್ಲಾಕ್ ಸೊಸೈಟಿ, ಮಂಗಳೂರು(ಗ್ರಾ) ಉಪಾಧ್ಯಕ್ಷೆ ಶಾರದ, ಉಪಸ್ಥಿತರಿದ್ದರು.

ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ಯಾಮಲಾ ಸಿ.ಕೆ ಸ್ವಾಗತಿಸಿದರು. ಮೇಲ್ವಿಚಾರಕಿ ಮಾಲಿನಿ ಮತದಾನದ ಪ್ರತಿಜ್ಞೆ ಭೋದಿಸಿದರು. ಕಾರ್ಯಕ್ರಮದಲ್ಲಿ ಸ್ತ್ರೀಶಕ್ತಿ ಗುಂಪಿನ ಸದಸ್ಯರು, ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರು, ಬ್ಲಾಕ್ ಸೊಸೈಟಿ ಸದಸ್ಯರು, ಎಂ.ಎಸ್.ಪಿ.ಸಿ. ಸದಸ್ಯರು, ಸೇರಿದಂತೆ ಸುಮಾರು 200 ಮಹಿಳೆಯರು ಮತದಾನ ಜಾಗೃತಿ ಓಟದಲ್ಲಿ ಪಾಲ್ಗೊಂಡರು.


Spread the love