ಮದುವೆಗೆ ಬರುತ್ತಿದ್ದ ಟೆಂಪೋ ಬಿಸ್ಲೆ ಘಾಟಿಯಲ್ಲಿ ಪಲ್ಟಿ ; ಹಲವರು ಗಂಭೀರ
ಮಂಗಳೂರು : ಕುಕ್ಕೆ ಸುಬ್ರಹ್ಮಣ್ಯ ಬಳಿಯ ಸಭಾಭವನದಲ್ಲಿ ನಡೆಯುತ್ತಿದ್ದ ಮದುವೆ ಕಾರ್ಯಕ್ರಮಕ್ಕೆ ಗಂಡಿನ ಕಡೆಯವರನ್ನು ಕರೆತರುತ್ತಿದ್ದ ಮಿನಿ ಬಸ್ ಬಿಸ್ಸೆ ಘಾಟ್ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಅಪಘಾತದಲ್ಲಿ ನಾಲ್ವರು ತೀವ್ರ ಗಾಯಗೊಂಡಿದ್ದಾರೆ. ಇತರ 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು ವಿವಿಧ ಕಡೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪುತ್ತೂರು, ಅ.30 : ಕುಕ್ಕೆ ಸುಬ್ರಹ್ಮಣ್ಯ ಬಳಿಯ ಸಭಾಭವನದಲ್ಲಿ ನಡೆಯುತ್ತಿದ್ದ ಮದುವೆ ಕಾರ್ಯಕ್ರಮಕ್ಕೆ ಗಂಡಿನ ಕಡೆಯವರನ್ನು ಕರೆತರುತ್ತಿದ್ದ ಮಿನಿ ಬಸ್ ಬಿಸ್ಸೆ ಘಾಟ್ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಅಪಘಾತದಲ್ಲಿ ನಾಲ್ವರು ತೀವ್ರ ಗಾಯಗೊಂಡಿದ್ದಾರೆ. ಇತರ 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು ವಿವಿಧ ಕಡೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದಿ ಸುಬ್ರಹ್ಮಣ್ಯದಲ್ಲಿ ಕೂಡುರಸ್ತೆ ವಣಗೂರು ಗ್ರಾಮದ ಯುವಕ ಹಾಗೂ ಏನೆಕಲ್ಲಿನ ವಧುವಿನೊಂದಿಗೆ ಬೆಳಗ್ಗೆ ಮದುವೆ ಕಾರ್ಯಕ್ರಮ ಇತ್ತು. ವಧು ಮತ್ತು ವರ ಇಬ್ಬರೂ ನಿನ್ನೆಯೇ ಹಾಲ್ಗೆ ಬಂದಿದ್ದರು. ಹುಡುಗನ ಕಡೆಯವರು ಇಂದು ಟೆಂಪೋ ವಾಹನದಲ್ಲಿ ಬರುತ್ತಿದ್ದ ವೇಳೆ ಬಿಲ್ಲೆ ಘಾಟಿಯ ತಿರುವಿನಲ್ಲಿ ವಾಹನ ಇಪ್ಪತ್ತು ಅಡಿ ಆಳಕ್ಕೆ ಪಲ್ಟಿಯಾಗಿ ಬಿದ್ದಿದೆ. ಟೆಂಪೋದಲ್ಲಿದ್ದ ಹಲವರು ಗಾಯಗೊಂಡಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ಪ್ರಥಮ ಚಿಕಿತ್ಸೆಗಾಗಿ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.












