ಮದುವೆಯ ಆಮಂತ್ರಣ ಪತ್ರ ನೀಡಿ ಬರುತ್ತೇನೆಂದು ತೆರಳಿದ್ದ ಯುವಕ ಕಾಣೆ
ಮಂಗಳೂರು: ರಕ್ಷಣ್ ಜೆ.ಕೆ (32) ಎಂಬವರು ಡಿ.6 ರಂದು ತನ್ನ ತಾಯಿಯ ಕಾರಿನಲ್ಲಿ ಹೊರಟು ಸಂಬಂಧಿಕರಿಗೆ ಹಾಗೂ ಸ್ನೇಹಿತರಿಗೆ ಮದುವೆಯ ಆಮಂತ್ರಣ ಪತ್ರ ನೀಡಿ ಬರುತ್ತೇನೆಂದು ಹೇಳಿ ಹೋದವರು ಕಾಣೆಯಾಗಿರುವ ಬಗ್ಗೆ ಪ್ರಕರಣ ದಕ್ಷಿಣ ಪೋಲಿಸ್ ಠಾಣೆಯಲ್ಲಿ ದಾಖಲಾಗಿದೆ. ಡಿ.6 ರಂದು ರಾತ್ರಿ 10:30 ಗಂಟೆಗೆ ನಗರದ ಟೌನ್ಹಾಲ್ ಬಳಿ ಕಾರು ಪತ್ತೆಯಾಗಿರುತ್ತದೆ.
ಕಾಣೆಯಾದವರ ಚಹರೆ: 5.8 ಅಡಿ ಎತ್ತರ, ಸಧೃಡ ಶರೀರ, ಗೋಧಿ ಮೈ ಬಣ್ಣ, ಕಪ್ಪು ಕೂದಲು, ತಿಳಿ ನೀಲಿ ಬಣ್ಣದ ಉದ್ದ ತೋಳಿನ ಶರ್ಟ್ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದರು. ತುಳು ಕನ್ನಡ,ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ.
ಕಾಣೆಯಾಗಿರುವವರ ಮಾಹಿತಿ ಪತ್ತೆಯಾದಲ್ಲಿ ದಕ್ಷಿಣ ಪೊಲೀಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
