Home Mangalorean News Kannada News ಮದ್ಯಪಾನ ಮಾಡಿ ವಾಹನ ಚಲಾಯಿಸಿದರೆ ದಂಡ: ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ

ಮದ್ಯಪಾನ ಮಾಡಿ ವಾಹನ ಚಲಾಯಿಸಿದರೆ ದಂಡ: ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ

Spread the love

ಮದ್ಯಪಾನ ಮಾಡಿ ವಾಹನ ಚಲಾಯಿಸಿದರೆ ದಂಡ: ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ

ಮಂಗಳೂರು: ಮದ್ಯಪಾನ ಮಾಡಿ ವಾಹನ ಚಲಾಯಿಸುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆ ಯಲ್ಲಿ ಮಂಗಳೂರು ನಗರ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ಸಾರ್ವಜನಿಕರಿಗೆ ಕೆಲವು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಮದ್ಯಪಾನ ಮಾಡಿ ವಾಹನ ಚಲಾಯಿಸಿದರೆ ರಸ್ತೆ ಅಪಘಾತ ಉಂಟಾಗಿ ಚಾಲಕ, ಪ್ರಯಾಣಿಕರು ಸಾವು ನೋವುಗಳನ್ನು ಅನುಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಇದರ ಪರಿಣಾಮ ಕುಟುಂಬ ಮತ್ತು ಅವಲಂಭಿತರ ಮೇಲೆ ಪ್ರಭಾವ ಬಿದ್ದು ದು:ಖ ಅನುಭವಿಸುತ್ತಾರೆ.

ಮದ್ಯ ಸೇವನೆ ಮಾಡಿ ವಾಹನ ಚಲಾಯಿಸಿದಲ್ಲಿ ಭಾರತೀಯ ಮೋಟಾರು ವಾಹನ ಕಾಯ್ದೆ ಕಲಂ 185ರ ಅನ್ವಯ ಪ್ರಕರಣ ದಾಖಲಿಸಿ 10,000ರೂ. ವರೆಗೆ ದಂಡ ಪಾವತಿಸಬೇಕಾಗುತ್ತದೆ. ಅತೀವೇಗದಿಂದ ವಾಹನ ಚಲಾಯಿಸಿದರೆ ಭಾರತೀಯ ಮೋಟಾರು ವಾಹನ ಕಾಯ್ದೆ ಕಲಂ 183ರ ಅನ್ವಯ ಪ್ರಕರಣ ದಾಖಲಿಸಿ 2/3/ಎಲ್‌ಎಂವಿ ವಾಹನಗಳಿಗೆ 1,000 ರೂ., ಎಚ್‌ಎಂವಿ /ಎಚ್‌ಜಿವಿ/ಇತರ ವಾಹನಗಳಿಗೆ 2,000 ರೂ.ವರೆಗೆ ದಂಡ ಪಾವತಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.


Spread the love

Exit mobile version