ಮನೆಗೆ ಅಕ್ರಮ ಪ್ರವೇಶ ಆರೋಪ : ಕಡಬ ಠಾಣಾ ಹೆಡ್ ಕಾನ್‌ಸ್ಟೇಬಲ್‌ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

Spread the love

ಮನೆಗೆ ಅಕ್ರಮ ಪ್ರವೇಶ ಆರೋಪ : ಕಡಬ ಠಾಣಾ ಹೆಡ್ ಕಾನ್‌ಸ್ಟೇಬಲ್‌ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

ಕಡಬ: ತಡರಾತ್ರಿ ಮನೆಯೊಂದಕ್ಕೆ ಅಕ್ರಮ ಪ್ರವೇಶಗೈದ ಕಡಬ ಠಾಣಾ ಹೆಡ್‌ಕಾನ್‌ಸ್ಟೇಬಲ್‌ನನ್ನು ಊರವರು ಹಿಡಿದಿದ್ದು, ಈ ವೇಳೆ ಸ್ಥಳದಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಮನೆಯ ಸದಸ್ಯರೊಬ್ಬರಿಗೆ ಹಲ್ಲೆ ನಡೆಸಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಎಂಬಲ್ಲಿ ಬುಧವಾರ ನಡೆದಿದೆ.

ಕಡಬ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ರಾಜು ನಾಯ್ಕ್ ಆರೋಪಿ. ಈತ ತಡರಾತ್ರಿ ಕೊಯಿಲ ನಿವಾಸಿ ಹರೀಶ್ ಎಂಬವರ ಮನೆಗೆ ಅಕ್ರಮವಾಗಿ ಪ್ರವೇಶಗೈದಿದ್ದು, ಈ ವೇಳೆ ಮನೆ ಮಂದಿ ಹಿಡಿದಿದ್ದಾರೆ ಎನ್ನಲಾಗಿದೆ.

ಸ್ಥಳದಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಚೇತನ್ ಎಂಬವರಿಗೆ ಹಲ್ಲೆಗೈದಿದ್ದಾರೆ. ಈ ಬಗ್ಗೆ ಕೊಯಿಲ ನಿವಾಸಿ ಬಾಬು ಗೌಡ ಎಂಬವರ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ರಾಜು ನಾಯ್ಕ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು, ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments