ಮನೆ ಕಳ್ಳತನ ಪ್ರಕರಣ: 24 ಗಂಟೆಯಲ್ಲಿ ಆರೋಪಿ ಬಂಧನ – ಚಿನ್ನ, ಬೆಳ್ಳಿ ಆಭರಣ ವಶ

Spread the love

ಮನೆ ಕಳ್ಳತನ ಪ್ರಕರಣ: 24 ಗಂಟೆಯಲ್ಲಿ ಆರೋಪಿ ಬಂಧನ – ಚಿನ್ನ, ಬೆಳ್ಳಿ ಆಭರಣ ವಶ

ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಉಲ್ಲಾಸ್ ನಗರದಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು 24 ಗಂಟೆಯೊಳಗೆ ಭೇದಿಸಿ ಆರೋಪಿಯನ್ನು ಬಂಧಿಸಿ ಕಳವು ಮಾಡಿದ ಸ್ವತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಮಾಹಿತಿಯ ಪ್ರಕಾರ, ಮಾರ್ಚ್ 7ರಂದು ಮಧ್ಯಾಹ್ನ ಸುಮಾರು 12 ಗಂಟೆಯ ವೇಳೆ ಮನೆಯಲ್ಲಿದ್ದವರು ಹೊರಗಿದ್ದ ಸಂದರ್ಭದಲ್ಲಿ ಉಲ್ಲಾಸ್ ನಗರದ ಮನೆಯೊಂದರ ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಸುಮಾರು ₹4,80,000 ಮೌಲ್ಯದ 39 ಗ್ರಾಂ ಚಿನ್ನಾಭರಣ ಹಾಗೂ 182 ಗ್ರಾಂ ಬೆಳ್ಳಿಯ ಆಭರಣಗಳನ್ನು ಕಳವು ಮಾಡಿದ್ದರು. ಈ ಬಗ್ಗೆ ನೀಡಿದ ದೂರಿನ ಆಧಾರದ ಮೇಲೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆಗಾಗಿ ಕಾವೂರು ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗಳಿಂದ ವಿಶೇಷ ಪತ್ತೆ ತಂಡವನ್ನು ರಚಿಸಲಾಗಿತ್ತು. ತನಿಖೆಯ ವೇಳೆ ಕಳ್ಳತನ ಮಾಡಿದ ಆರೋಪಿಯಾಗಿ ಅಶೋಕ್ (41), ತಂದೆ ದೊಂಬಯ್ಯ ಪೂಜಾರಿ, ದೇರಾಜೆ ಮನೆ, ಸಜೀಪನಡು, ದಕ್ಷಿಣ ಕನ್ನಡ ನಿವಾಸಿಯನ್ನು ಮಾರ್ಚ್ 8ರಂದು ಬಂಧಿಸಲಾಗಿದೆ. ಬಂಧಿತನಿಂದ ಕಳವು ಮಾಡಿದ ಎಲ್ಲಾ ಆಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಈ ಪತ್ತೆ ಕಾರ್ಯಾಚರಣೆಯಲ್ಲಿ ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಘವೇಂದ್ರ ಎಂ. ಬೈಂದೂರು, ಉಪ ನಿರೀಕ್ಷಕ ಮಲ್ಲಿಕಾರ್ಜುನ ಬಿರಾದಾರ್ ಹಾಗೂ ಸಿಬ್ಬಂದಿಗಳಾದ ದಿನೇಶ್, ಮಾಲತೇಶ್, ನಾಗರಾಜ್ ಮತ್ತು ರಿಯಾಜ್ ಭಾಗವಹಿಸಿದ್ದರು.


Spread the love
Subscribe
Notify of

0 Comments
Inline Feedbacks
View all comments