ಮನೆ ಮನೆ ಸಮೀಕ್ಷೆ: ಅಕ್ಟೋಬರ್ 18 ರ ವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ ವಿಸ್ತರಣೆ

Spread the love

ಮನೆ ಮನೆ ಸಮೀಕ್ಷೆ: ಅಕ್ಟೋಬರ್ 18 ರ ವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ ವಿಸ್ತರಣೆ

ಬೆಂಗಳೂರು: ಕರ್ನಾಟಕದಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ   ನಡೆಯುತ್ತಿದ್ದು, ಇಂದು ಕೊನೆ ದಿನವಾಗಿದೆ. ಆದ್ರೆ, ನಿರೀಕ್ಷೆಯಂತೆ ಸಮೀಕ್ಷೆ ಮುಗಿಯದ ಕಾರಣ ಜಾತಿಗಣತಿ ಅವಧಿಯನ್ನು ವಿಸ್ತರಿಸಲಾಗಿದೆ. ಶಿಕ್ಷಕರನ್ನು ಸಮೀಕ್ಷೆಗೆ ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳಲು ತೀರ್ಮಾನಿಸಲಾಗಿದೆ. ಇದರಿಂದ ಅಕ್ಟೋಬರ್​ 18ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ರಜೆ   ನೀಡಲು ನಿರ್ಧರಿಸಲಾಗಿದೆ. ಈಗಾಲೇ ದಸರಾ ರಜೆಯಲ್ಲಿ ವಿದ್ಯಾರ್ಥಿಗಳಿಗೆ ಇದೀಗ ಜಾತಿಗಣತಿಯ ರಜೆ ಸಿಕ್ಕಂತಾಗಿದೆ.

ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಇಂದು ಕೊನೆ ದಿನವಾಗಿದ್ದರಿಂದ ಸಿಎಂ ಸಿದ್ದರಾಮಯ್ಯನವರು ಹಿಂದುಳಿದ ವರ್ಗಗಳ ಆಯೋಗದ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದ್ದು, ಶಿಕ್ಷಕರನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಂಡು ಸಮೀಕ್ಷೆ ಪೂರ್ಣಗೊಳಿಸಲು ತೀರ್ಮಾನ ಸಭೆಯಲ್ಲಿ ನಿರ್ಧರಿಸಲಾಗಿದೆ. ಹೀಗಾಗಿ ಅಕ್ಟೋಬರ್​ 18ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ರಜೆ ನೀಡಲು ತೀರ್ಮಾನಿಸಲಾಗಿದೆ. ಸರ್ಕಾರಿ ಮತ್ತು ಅನುದಾನಿತ ಶಾಲಾ ಶಿಕ್ಷಕರಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ. ಹೀಗಾಗಿ ಖಾಸಗಿ ಶಾಲೆಗಳಿಗೆ ಈ ರಜೆ ಅನ್ವಯವಾಗುವುದಿಲ್ಲ.

ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅ.18ರವರೆಗೆ ಎಲ್ಲಾ ಶಾಲೆಗಳಿಗೆ (ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ) ರಜೆ ವಿಸ್ತರಣೆ ಮಾಡಲಾಗುವುದು. ರಜೆ ವಿಸ್ತರಣೆ ಮಾಡಬೇಕೆಂದು ಶಿಕ್ಷಕರ ಸಂಘ ಮನವಿ ಮಾಡಿತ್ತು. ಮನವಿ ಆಧರಿಸಿ ಅ.18ರವರೆಗೆ ಶಾಲೆಗಳಿಗೆ ರಜೆ ನೀಡಲಾಗುವುದು. ಸಮೀಕ್ಷೆಯಲ್ಲಿ 1.20 ಲಕ್ಷ ಶಿಕ್ಷಕರು ಭಾಗಿಯಾಗಿದ್ದಾರೆ. ಪೂರ್ಣ ಕೆಲಸ ಆಗಬೇಕು ಅಂದ್ರೆ ರಜೆ ವಿಸ್ತರಿಸುವಂತೆ ಕೇಳಿದ್ದಾರೆ. ಹಾಗಾಗಿ ನಾಳೆಯಿಂದ ಅಕ್ಟೋಬರ್​ 18ರವರೆಗೆ ಶಾಲೆಗಳಿಗೆ ರಜೆ ನೀಡಲು ತೀರ್ಮಾನಿಸಲಾಗಿದೆ. ಪಿಯುಸಿ ಉಪನ್ಯಾಸಕರು ಸಮೀಕ್ಷೆಯಲ್ಲಿ ಭಾಗಿಯಾಗುವಂತಿಲ್ಲ. ಇನ್ನು ಬೆಂಗಳೂರಿನಲ್ಲಿ 6,700 ಶಿಕ್ಷಕರು ಸಮೀಕ್ಷೆ ಭಾಗಿಯಾಗಿದ್ದಾರೆ ಎಂದು ಮಾಹಿತಿ ನೀಡಿದರು.

ಸೆಪ್ಟೆಂಬರ್ 2 ರಿಂದ ರಾಜ್ಯದ ಜನರ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸಮೀಕ್ಷೆ ಶುರುವಾಗಿದೆ. ಸಮೀಕ್ಷೆ ಇವತ್ತು ಮುಗಿಯಬೇಕಿತ್ತು. ಕೆಲವು ಜಿಲ್ಲೆಗಳಲ್ಲಿ ಪೂರ್ತಿ ಆಗಿಲ್ಲ. ಕೊಪ್ಪಳ ಶೇ97 ಆಗಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ67 ರಷ್ಟು ಆಗಿದೆ. ಹೀಗೆ ವ್ಯತ್ಯಾಸಗಳಿವೆ. ಹೀಗಾಗಿ ಶಿಕ್ಷಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಆಯೋಗ ಚರ್ಚಿಸಿದ್ದಾರೆ. 1 ಲಕ್ಷ 20 ಸಾವಿರ ಶಿಕ್ಷಕರು ಸೇರಿ ಒಂದು ಲಕ್ಷ ಅರವತ್ತು ಸಾವಿರ ಸಿಬ್ಬಂದಿ ಸಮೀಕ್ಷೆಯಲ್ಲಿ ತೊಡಗಿದ್ದಾರೆ.

ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಮತ್ತು ಶಿಕ್ಷಕರ ಸಂಘ ಹೆಚ್ಚುವರಿಯಾಗಿ 10 ದಿನಗಳ ಕಾಲಾವಕಾಶ ಕೇಳಿ ಮನವಿ ಮಾಡಿದ್ದಾರೆ. ಈ ಮನವಿ ಪುರಸ್ಕರಿಸಿ ಅಕ್ಟೋಬರ್ 18ರ ವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ ಘೋಷಿಸಿದ್ದೇವೆ. 8 working days ರಜೆ ಘೋಷಿಸಲಾಗಿದೆ.

ಇದೇ 12ನೇ ತಾರೀಕಿನಿಂದ ದ್ವಿತೀಯ ಪಿಯು ಮಧ್ಯಂತರ ಪರೀಕ್ಷೆ ನಡೆಯುತ್ತಿರುವುದರಿಂದ ಸಮೀಕ್ಷೆ ಕಾರ್ಯದಿಂದ ಪಿಯುಸಿ ಉಪನ್ಯಾಸಕರಿಗೆ ವಿನಾಯ್ತಿ ನೀಡಲಾಗಿದೆ ಎಂದರು.

ಬೆಂಗಳೂರು ನಗರದಲ್ಲಿ 6700 ಜನ ಶಿಕ್ಷಕರು ಸಮೀಕ್ಷೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ 46 ಲಕ್ಷ ಮನೆಗಳಿವೆ. ದಿನಕ್ಕೆ 10-15 ಮನೆಗಳ ಸಮೀಕ್ಷೆ ನಡೆಸುವ ಗುರಿ ನೀಡಲಾಗಿದೆ. ಬೆಂಗಳೂರಿನಲ್ಲಿ ನರಕ ಚತುರ್ದಷಿ ಒಳಗೆ ಸಮೀಕ್ಷೆ ಮುಗಿಸಲು ಸೂಚಿಸಲಾಗಿದೆ. ಶಿಕ್ಷಕರು ಕೂಡ ಇಷ್ಟರೊಳಗೆ ಸಮೀಕ್ಷೆ ಮುಗಿಸುವ ಭರವಸೆ ನೀಡಿದ್ದಾರೆ.

ಸಮೀಕ್ಷೆ ನಡೆಯುವಾಗ ಮೂವರು ಶಿಕ್ಷಕರು ಮೃತಪಟ್ಟಿದ್ದಾರೆ. ಇವರಿಗೆ ತಲಾ 20 ಲಕ್ಷ ಪರಿಹಾರ ನೀಡಲಾಗುವುದು ಎಂದರು.

ಸಮೀಕ್ಷೆಯಲ್ಲಿ ತೊಡಗಿಸಿಕೊಳ್ಳಲುಒಪ್ಪದ, ಹಿಂದೇಟು ಹಾಕುವವರ ವಿರುದ್ಧ ಸರ್ಕಾರ ಶಿಸ್ತಿನ ಕ್ರಮ ಕೈಗೊಳ್ಳಲಿದೆ.

GBA ಏರಿಯಾದಲ್ಲಿ ತಡವಾಗಿ ಸಮೀಕ್ಷೆ ಶುರುವಾಗಿದೆ. ಚುನಾವಣಾ ಆಯೋಗದ ಕೆಲಸ ಮತ್ತು ಇತರೆ ತರಬೇತಿ ಇದ್ದಿದ್ದರಿಂದ ತಡವಾಗಿ ಶುರುವಾಗಿದೆ. ಆದ್ದರಿಂದ GBA ಏರಿಯಾದಲ್ಲಿ ಸಮೀಕ್ಷೆ ಪ್ರಮಾಣ ಕಡಿಮೆ ಇದೆ.


Spread the love
Subscribe
Notify of

0 Comments
Inline Feedbacks
View all comments