Spread the love
ಮಲ್ಪೆ ಪೊಲೀಸ್ ಠಾಣೆಯ ಎಎಸ್ಐ ಹೃದಯಾಘಾತದಿಂದ ಮೃತ್ಯು
ಮಲ್ಪೆ: ಮಲ್ಪೆ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ(ಎಎಸ್ಸೈ) ವಿಶ್ವನಾಥ್ (56) ಎಂಬವರು ರವಿವಾರ ರಾತ್ರಿ ಹೃದಯಾಘಾತದಿಂದ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮಲ್ಪೆ ಪೊಲೀಸ್ ಠಾಣೆಯ ಸಿಬ್ಬಂದಿಗೆ ಹಮ್ಮಿಕೊಳ್ಳಲಾಗಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ವಿಶ್ವನಾಥ್ ಅವರು ಹಾಡುತ್ತಿರುವಾಗ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಕೂಡಲೇ ಇವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಪರೀಕ್ಷಿಸಿದ ವೈದ್ಯರು ವಿಶ್ವನಾಥ್ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ಇತ್ತೀಚಿಗಷ್ಟೇ ಇವರು ಮಲ್ಪೆ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡು ಬಂದಿದ್ದರು ಎಂದು ತಿಳಿದುಬಂದಿದೆ.
Spread the love












