Spread the love
ಮಳೆ ಹಿನ್ನಲೆ : ಜು. 25 ರಂದು ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಿಲ್ಲ – ಉಡುಪಿ ಜಿಲ್ಲಾಡಳಿತ ಸ್ಪಷ್ಟನೆ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಜುಲೈ 23 ಮತ್ತು 24 ರಂದು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿತ್ತು. ಆದರೆ ಜುಲೈ 25 ರಂದು ಜಿಲ್ಲೆಯ ಯಾವುದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆ – ಜು 25 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಎನ್ನುವ ಕರಾವಳಿಯ ಅಂತರ್ಜಾಲ ಸುದ್ದಿವಾಹಿನಿಯಾದ ಮ್ಯಾಂಗಲೋರಿಯನ್ ಡಾಟ್ ಕಾಮ್ ಇದರ ಎಡಿಟ್ ಮಾಡಿದ ಸ್ಕ್ರೀನ್ ಶಾಟ್ ಒಂದನ್ನು ಕೆಲವೊಂದು ಕಿಡಿಗೇಡಿಗಳು ತಯಾರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಇವುಗಳನ್ನು ನಂಬಬಾರದು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.
Spread the love














Is holiday for schools and colleges in udupi