Home Mangalorean News Kannada News ಮಹಾಲಕ್ಷ್ಮೀ ಕೋ-ಓಪರೇಟಿವ್ ಬ್ಯಾಂಕ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್  ಸುವರ್ಣ

ಮಹಾಲಕ್ಷ್ಮೀ ಕೋ-ಓಪರೇಟಿವ್ ಬ್ಯಾಂಕ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್  ಸುವರ್ಣ

Spread the love

ಮಹಾಲಕ್ಷ್ಮೀ ಕೋ-ಓಪರೇಟಿವ್ ಬ್ಯಾಂಕ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್  ಸುವರ್ಣ

ಉಡುಪಿ: ಮಹಾಲಕ್ಮೀ ಕೋ-ಓಪರೇಟಿವ್ ಬ್ಯಾಂಕ್ ಲಿ., ಉಡುಪಿ ಇದರ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಶ್ರೀ ಯಶ್‌ಪಾಲ್ ಎ ಸುವರ್ಣ ತಿಳಿಸಿದ್ದಾರೆ.

ಬ್ಯಾಂಕಿನ ಸದಸ್ಯರ ಮಕ್ಕಳು 2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇಕಡಾ 90, ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇಕಡಾ 85 ಹಾಗೂ 2023-2024ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ.75 ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇಕಡಾ 70 ಅಂಕಗಳಿಸಿದ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಇತರ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇಕಡಾ 95, ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇಕಡಾ 90 ಹಾಗೂ 2023-24ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇಕಡಾ 80 ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇಕಡಾ 75 ಅಂಕ ಪಡೆದಿರಬೇಕು.

ಪ್ರತಿಭಾ ಪುರಸ್ಕಾರದ ಅರ್ಜಿಗಳು ಮಹಾಲಕ್ಷ್ಮೀ ಕೋ-ಓಪರೇಟಿವ್ ಬ್ಯಾಂಕಿನ ಎಲ್ಲಾ ಶಾಖೆ ಹಾಗೂ ಬ್ಯಾಂಕಿನ ಅಧಿಕೃತ ವೈಬ್‌ಸೈಟ್ www.mahalakshmicoopbank.com ನಲ್ಲಿ ಲಭ್ಯವಿದ್ದು ದಿನಾಂಕ:19-07-2025 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯುವಂತೆ ಪ್ರಕಟಣೆಯಲ್ಲಿ ಅಧ್ಯಕ್ಷರಾದ ಯಶ್‌ಪಾಲ್ ಎ ಸುವರ್ಣ ತಿಳಿಸಿದ್ದಾರೆ.


Spread the love

Exit mobile version