Home Mangalorean News Kannada News ಮಹಿಳೆಯರಿಗೆ ಸ್ವ ಉದ್ಯೋಗಕ್ಕೆ ಪ್ರೋತ್ಸಾಹ ಧನ ಪಾವತಿಗೆ ಅಗತ್ಯ ಕ್ರಮ ವಹಿಸಲು ಜಿಲ್ಲಾಧಿಕಾರಿ ಸೂಚನೆ

ಮಹಿಳೆಯರಿಗೆ ಸ್ವ ಉದ್ಯೋಗಕ್ಕೆ ಪ್ರೋತ್ಸಾಹ ಧನ ಪಾವತಿಗೆ ಅಗತ್ಯ ಕ್ರಮ ವಹಿಸಲು ಜಿಲ್ಲಾಧಿಕಾರಿ ಸೂಚನೆ

Spread the love

ಮಹಿಳೆಯರಿಗೆ ಸ್ವ ಉದ್ಯೋಗಕ್ಕೆ ಪ್ರೋತ್ಸಾಹ ಧನ ಪಾವತಿಗೆ ಅಗತ್ಯ ಕ್ರಮ ವಹಿಸಲು ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ಜಿಲ್ಲೆಯಲ್ಲಿರುವ ಲಿಂಗತ್ವ ಅಲ್ಪಸಂಖ್ಯಾತರಿಗೆ ಗುರುತು ಚೀಟಿ ನೀಡಲು ಸಮುದಾಯ ಆಧಾರಿತ ಸಂಸ್ಥೆಗಳು ಸಹಕರಿಸಬೇಕು. ಅವರಿಗೆ ನಿವೇಶನವನ್ನು ಮಂಜೂರು ಮಾಡುವ ಕುರಿತು ಸಂಬಂಧಪಟ್ಟ ಇಲಾಖೆಗಳು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಸೂಚಿಸಿದ್ದಾರೆ.

ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳ ಆಯ್ಕೆ ಹಾಗೂ ಸಮನ್ವಯ ಸಮಿತಿ ಸಭೆ ಹಾಗೂ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆ ಕಾಯಿದೆ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಧನಶ್ರೀ ಯೋಜನೆಯಡಿ ಹೆಚ್.ಐ.ವಿ ಸೋಂಕಿತ ಮಹಿಳೆಯರಿಗೆ ಹಾಗೂ ಚೇತನ ಯೋಜನೆಯಡಿ ದಮನಿತ ಮಹಿಳೆಯರಿಗೆ ಸ್ವ ಉದ್ಯೋಗಕ್ಕೆ ಪ್ರೋತ್ಸಾಹಧನ ಪಾವತಿಗೆ ಕ್ರಮ ಕೈಗೊಳ್ಳಬೇಕು. ಫಲಾನುಭವಿಗಳಿಗೆ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್ ಅಥವಾ ಇನ್ನಿತರೆ ದಾಖಲೆಗಳ ಸಮಸ್ಯೆಯಾದಲ್ಲಿ ಅದನ್ನು ಪರಿಹರಿಸುವಂತೆ ಕ್ರಮವಹಿಸಬೇಕು ಎಂದು ಅವರು ಹೇಳಿದರು.

15 ಮಂದಿ ನಿವೇಶನ ರಹಿತ ಟ್ರಾನ್ಸ್ಜೆಂಡರ್ಸ್ ಪಟ್ಟಿಯನ್ನು ಮಹಾನಗರಪಾಲಿಕೆಗೆ ಒದಗಿಸಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ನೋಂದಾಯಿಸಿದ ಒಟ್ಟು 45 ಮಂದಿ ಟ್ರಾನ್ಸ್ಜೆಂಡರ್ಸ್ ರವರಿಗೆ ತಿಂಗಳಿಗೆ 2000 ಮೊತ್ತವನ್ನು ನೀಡಲಾಗುತ್ತಿದೆ. ಇತ್ತೀಚಿಗೆ ನಡೆದ ಸರ್ವೇಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 96 ಟ್ರಾನ್ಸ್ಜೆಂಡರ್ಸ್ ವ್ಯಕ್ತಿಗಳು ನೊಂದಾಯಿಸಿರುತ್ತಾರೆ. ಟ್ರಾನ್ಸ್ ಜೆಂಡರ್ ಪುರ್ನವಸತಿ ಯೋಜನೆಯಡಿ 18 ರಿಂದ 60 ವರ್ಷ ವಯೋಮಿತಿ ವ್ಯಕ್ತಿಗಳು ಸ್ವ-ಉದ್ಯೋಗ ಕೈಗೊಳ್ಳಲು ರೂ.30 ಸಾವಿರ ಪೆÇ್ರೀತ್ಸಾಹಧನ ನೀಡಲಾಗುತ್ತದೆ. ಟ್ರಾನ್ಸ್ ಜೆಂಡರ್ಸ್ ಪುರ್ನವಸತಿ ಯೋಜನೆಯಡಿ ಒಟ್ಟು 16 ಅರ್ಜಿಗಳು ಸ್ವೀಕೃತವಾಗಿದ್ದು, 1 ಅರ್ಜಿಯು ಯಾವುದೇ ದಾಖಲೆಗಳು ಇಲ್ಲದೆ ತಿರಸ್ಕøತಗೊಂಡಿರುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಭಿವೃದ್ಧಿ ನಿರೀಕ್ಷಕಿ ಚಂದ್ರಿಕಾ ಸಭೆಗೆ ಮಾಹಿತಿ ನೀಡಿದರು.

ಜಿಲ್ಲಾ ಮಟ್ಟದಲ್ಲಿ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ (PಔSಊ) ಕಾಯ್ದೆಯ ಬಗ್ಗೆ ಐ.ಇ.ಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು. 10 ಅಥವಾ 10ಕ್ಕಿಂತ ಹೆಚ್ಚು ಸಿಬ್ಬಂದಿಗಳು ಕೆಲಸ ನಿರ್ವಹಿಸುತ್ತಿರುವ ಸ್ಥಳಗಳಲ್ಲಿ ಆಂತರಿಕ ದೂರುಗಳ ಸಮಿತಿ ರಚಿಸಿ, ಜಿಲ್ಲಾ ಮಟ್ಟದಲ್ಲಿ ಆಂತರಿಕ ಮತ್ತು ಸ್ಥಳೀಯ ದೂರು ಸಮಿತಿಯ ವಿಚಾರಣಾ ವರದಿಯಂತೆ ನಿಯಮಾನುಸಾರ ಕ್ರಮ ವಹಿಸಬೇಕು. ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆ ಕಾಯ್ದೆಯನ್ನು ಸಮಗ್ರವಾಗಿ ಅನುμÁ್ಠನ ಮಾಡಬೇಕು. ಶಿ ಬಾಕ್ಸ್ ಪೋರ್ಟಲ್ನಲ್ಲಿ ನಿಖರವಾಗಿ ಮಾಹಿತಿಯನ್ನು ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಜೈಬುನ್ನೀಸಾ, ಅಪರ ಜಿಲ್ಲಾಧಿಕಾರಿ ರಾಜು.ಕೆ, ಸಹಾಯಕ ಪೋಲಿಸ್ ಆಯುಕ್ತೆ ಗೀತಾ ಕುಲಕರ್ಣಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಉಸ್ಮಾನ್ ಎ, ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.


Spread the love

Exit mobile version