ಮಹಿಳೆ ನಾಪತ್ತೆ: ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Spread the love

ಮಹಿಳೆ ನಾಪತ್ತೆ: ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಮಂಗಳೂರು: ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಸಾರ್ವಜನಿಕರಿಂದ ಮಾಹಿತಿ ಕೋರಲಾಗಿದೆ.

ಜಗದೀಶ್, ಫ್ಲ್ಯಾಟ್ ನಂ.218, ರೆಡ್ ಬ್ರಿಕ್ಸ್ ಅಪಾರ್ಟ್‌ಮೆಂಟ್, ಸರಿಪಳ್ಳ, ಕುಲಶೇಖರ ಪೋಸ್ಟ್, ಮಂಗಳೂರು ನಿವಾಸಿಯಾಗಿರುವವರ ಪತ್ನಿ ವಿನಯ (40) ಅವರು 2026ರ ಮೇ 12ರಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ ಮನೆಯಿಂದ ತೆರಳಿದ್ದು, ಇದುವರೆಗೆ ಮನೆಗೆ ಮರಳಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಸಂಬಂಧ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 54/2026ರಡಿ ಮನುಷ್ಯ ಕಾಣೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ನಾಪತ್ತೆಯಾಗಿರುವ ಮಹಿಳೆಯ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಸಾರ್ವಜನಿಕರು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಸಂಪರ್ಕ ಸಂಖ್ಯೆ: 0824-2220535, 9480805330, 9480802343


Spread the love
Subscribe
Notify of

0 Comments