ಮಹೇಶ್ ಶೆಟ್ಟಿ ತಿಮರೋಡಿಗೆ ಷರತ್ತುಬದ್ಧ ಜಾಮೀನು ಮಂಜೂರು

Spread the love

ಮಹೇಶ್ ಶೆಟ್ಟಿ ತಿಮರೋಡಿಗೆ ಷರತ್ತುಬದ್ಧ ಜಾಮೀನು ಮಂಜೂರು

ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಉಡುಪಿ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಮೂರು ಗಂಟೆಗಳ ಪೊಲೀಸ್ ಕಸ್ಟಡಿ ಬಳಿಕ ಸಂಜೆ 4ಕ್ಕೆ ಉಡುಪಿ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದು ಆರೋಪಿ ಪರ ವಕೀಲ ವಿಜಯ ವಾಸು ಪೂಜಾರಿ ಹಾಗೂ ಸಹಾಯಕ ಸರಕಾರಿ ಅಭಿಯೋಜಕರ ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶ ನಾಗೇಶ್ ಎನ್ಎ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶಿಸಿದರು.

ಈ ಸಂದರ್ಭದಲ್ಲಿ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿ ಹಾಜರಿದ್ದರು.


Spread the love
Subscribe
Notify of

0 Comments
Inline Feedbacks
View all comments