ಮಹೇಶ್ ಶೆಟ್ಟಿ ತಿಮರೋಡಿ ಒಂದು ವರ್ಷ ಗಡಿಪಾರು
ಬೆಳ್ತಂಗಡಿ: ಜಿಲ್ಲಾ ವ್ಯಾಪ್ತಿಯಲ್ಲಿ 32ಕ್ಕೂ ಹೆಚ್ಚು ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿರುವ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಯನ್ನು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜಿಲ್ಲೆಯಿಂದ ಗಡಿಪಾರು ಮಾಡಲು ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಬೆಳ್ತಂಗಡಿ ಪೊಲೀಸರು ತಿಮರೋಡಿ ವಿರುದ್ಧ ದಾಖಲಾದ ಪ್ರಕರಣಗಳ ವಿವರಗಳನ್ನು ಪುತ್ತೂರು ಸಹಾಯಕ ಆಯುಕ್ತರಾದ ಸ್ಟೆಲ್ಲಾ ವರ್ಗಿಸ್ ಅವರಿಗೆ ಸಲ್ಲಿಸಿದ್ದರು. ವರದಿ ಪರಿಶೀಲಿಸಿದ ಬಳಿಕ, ಸೆಪ್ಟೆಂಬರ್ 18ರಂದು ಸಹಾಯಕ ಆಯುಕ್ತರು ಗಡಿಪಾರು ಆದೇಶ ಹೊರಡಿಸಿದ್ದಾರೆ.
ಅದರಂತೆ, ಮಹೇಶ್ ಶೆಟ್ಟಿ ತಿಮರೋಡಿಯನ್ನು ಒಂದು ವರ್ಷ ಅವಧಿಗೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ವಾಸಿಸುವಂತೆ ಸೂಚಿಸಲಾಗಿದೆ. ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ಅವರಿಗೆ ಆದೇಶದ ಪ್ರತಿ ತಲುಪಿದ್ದು, ಶೀಘ್ರದಲ್ಲೇ ಗಡಿಪಾರು ಪ್ರಕ್ರಿಯೆ ಜಾರಿಗೆ ಬರಲಿದೆ.