Spread the love
ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಪುತ್ರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ
ಬ್ರಹ್ಮಾವರ: ಕಾರ್ಕಳದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ.
ಮೃತ ಸುದೀಪ್ ಭಂಡಾರಿ ಹೆಬ್ರಿಯಲ್ಲಿ ವೈನ್ ಶಾಪ್ ನಡೆಸಿಕೊಂಡಿದ್ದು ಅತ್ಯಂತ ಸರಳ ವ್ಯಕ್ತಿತ್ವದವರಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ
ಮೃತ ಸುದೀಪ್ ಭಂಡಾರಿ ತಾಯಿ, ಪತ್ನಿ, ಇಬ್ಬರು ಮಕ್ಕಳು, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.
ಸ್ಥಳಕ್ಕೆ ಬ್ರಹ್ಮಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Spread the love