ಮಾದಕವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ – ನಾಲ್ವರು ಯುವಕರು ಪೊಲೀಸರ ವಶಕ್ಕೆ

Spread the love

ಮಾದಕವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ – ನಾಲ್ವರು ಯುವಕರು ಪೊಲೀಸರ ವಶಕ್ಕೆ

ಪುತ್ತೂರು: ಸಾರ್ವಜನಿಕ ಸ್ಥಳದಲ್ಲಿ ಮಾದಕವಸ್ತು ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದ ನಾಲ್ವರು ಯುವಕರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಗಳ ವಿವರ:  ಮುಬಾರಕ್ (21) – ವಾಸ: ನೆಕ್ಕಿಲಾಡಿ ಗ್ರಾಮ, ಪುತ್ತೂರು, ಹಿತೇಶ್ (21) – ತಂದೆ: ವಾಸು ಪೂಜಾರಿ, ವಾಸ: ಬಿಳಿಯೂರು ಗ್ರಾಮ, ಬಂಟ್ವಾಳ, ಅಬ್ದುಲ್ ಅನಾಸ್ (21) – ವಾಸ: ನೆಕ್ಕಿಲಾಡಿ ಗ್ರಾಮ, ಪುತ್ತೂರು, ಉಮ್ಮರ್ ಫಾರೂಕ್ (41) – ವಾಸ: ಕಬಕ ಗ್ರಾಮ, ಪುತ್ತೂರು

ದಿನಾಂಕ 05 ನವೆಂಬರ್ 2025 ರಂದು ಸಂಜೆ ವೇಳೆ ಪುತ್ತೂರು ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕ ಆಂಜನೇಯ ರೆಡ್ಡಿ ಜಿ.ವಿ. ಅವರು ಸಿಬ್ಬಂದಿಗಳೊಂದಿಗೆ ಠಾಣಾ ವ್ಯಾಪ್ತಿಯಲ್ಲಿ ಪೆಟ್ರೋಲಿಂಗ್ ನಡೆಸುತ್ತಿದ್ದ ಸಂದರ್ಭದಲ್ಲಿ, ಪುತ್ತೂರು ತಾಲೂಕಿನ ಕಬಕ ಗ್ರಾಮದ ಕಲ್ಲಂದಡ್ಕ ಪ್ರದೇಶದಲ್ಲಿ ನಾಲ್ವರು ವ್ಯಕ್ತಿಗಳು ಅನುಚಿತವಾಗಿ ವರ್ತಿಸುತ್ತಿರುವ ಬಗ್ಗೆ ಮಾಹಿತಿ ದೊರೆತಿತ್ತು.

ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಸಾರ್ವಜನಿಕ ಸ್ಥಳದಲ್ಲಿ ನಾಲ್ವರು ವ್ಯಕ್ತಿಗಳು ಅನುಮಾನಾಸ್ಪದವಾಗಿ ವರ್ತಿಸುತ್ತಿರುವುದು ಕಂಡುಬಂದಿತು. ವಿಚಾರಣೆ ವೇಳೆ ಅವರು ಮಾದಕ ವಸ್ತು ಸೇವಿಸಿದ್ದಾಗಿ ಒಪ್ಪಿಕೊಂಡರು. ಬಳಿಕ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ನಿಷೇಧಿತ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ.

ಈ ಹಿನ್ನೆಲೆಯಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ 105/2025ರಡಿ, ಮಾದಕ ವಸ್ತುಗಳು ಮತ್ತು ಮನೋವಿಕಾರಕಾರಿ ಪದಾರ್ಥಗಳ ನಿಯಂತ್ರಣ ಕಾಯಿದೆ (NDPS Act) ಕಲಂ 27(b) ಅಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.

ಪೊಲೀಸರು ಪ್ರಕರಣದ ತನಿಖೆಯನ್ನು ಮುಂದುವರೆಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments