ಮಾರಿಷಸ್‌ನಲ್ಲಿ ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಮೃತ್ಯು

Spread the love

ಮಾರಿಷಸ್‌ನಲ್ಲಿ ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಮೃತ್ಯು

ಸುಳ್ಯ: ವಿದೇಶದಲ್ಲಿ ಶಿಕ್ಷಣ ಪಡೆಯುತ್ತಿರುವ ಸುಳ್ಯದ ಯುವಕನೋರ್ವ ಅಲ್ಲಿ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಸೋಮವಾರ ಸಂಭವಿಸಿದೆ.

ಸುಬ್ರಹ್ಮಣ್ಯ ಸಮೀಪದ ನಡುಗಲ್ಲು ಕಲ್ಲಾಜೆಯ ಜಯಲಕ್ಷ್ಮಿ ಎಂಬವರ ಪುತ್ರ ನಂದನ ಎಸ್. ಭಟ್ (25) ಮೃತರು. ನಂದನ ಅವರು ಮಾರಿಷಸ್ ನಲ್ಲಿ ವಿದ್ಯಾರ್ಥಿ ವೀಸಾದಲ್ಲಿದ್ದು ಅಲ್ಲಿ ಜಲಪಾತ ವೀಕ್ಷಣೆಗೆ ಹೋಗಿದ್ದ ವೇಳೆ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಮೃತದೇಹವನ್ನು ಅಲ್ಲಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

ಘಟನೆ ಸೋಮವಾರ ನಡೆದಿದೆ ಎನ್ನಲಾಗಿದ್ದು, ಮೃತದೇಹವನ್ನು ಅಲ್ಲಿನ ಸರಕಾರಿ ವ್ಯವಸ್ಥೆ ಮೂಲಕ ಹಾಗೂ ಇಲ್ಲಿನ ಸರಕಾರದ ಸಹಾಯದಿಂದ ತರಲು ವ್ಯವಸ್ಥೆ ಮಾಡುವಂತೆ ಮೃತ ಯುವಕನ ತಾಯಿಯ ತಮ್ಮ ಕಾರ್ಕಳದ ಸತ್ಯನಾರಾಯಣ ಭಟ್ ಅವರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಮಾಡಿದ್ದಾರೆ.

ನಂದನ ಅವರು ಮಾರಿಷಸ್‍ನಲ್ಲಿ ವ್ಯಾಸಂಗ ಮಾಡುತ್ತಿದ್ದರು. ನಂದನ್ ಅವರು ಸುಬ್ರಹ್ಮಣ್ಯದ ಕಲ್ಲಾಜೆಯ ತನ್ನ ತಾಯಿಯ ಸಹೋದರ ಕೃಷ್ಣ ಕುಮಾರ್ ಅವರ ಮನೆಯಲ್ಲಿ ವಾಸ ಮಾಡಿಕೊಂಡಿದ್ದರು. ಅವರಿಗೆ ತಾಯಿ, ಸಹೋದರಿ ಇದ್ದಾರೆ.


Spread the love
Subscribe
Notify of

0 Comments
Inline Feedbacks
View all comments