ಮಾ.13: ಉಡುಪಿ ಜಿಲ್ಲೆಯ ಗ್ಯಾರಂಟಿ ಸಮಾವೇಶದಲ್ಲಿ ಸಿದ್ದರಾಮಯ್ಯ, ಡಿಕೆಶಿ ಭಾಗಿ

Spread the love

ಮಾ.13: ಉಡುಪಿ ಜಿಲ್ಲೆಯ ಗ್ಯಾರಂಟಿ ಸಮಾವೇಶದಲ್ಲಿ ಸಿದ್ದರಾಮಯ್ಯ, ಡಿಕೆಶಿ ಭಾಗಿ

ಉಡುಪಿ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಶಕ್ತಿ ಯೋಜನೆ, ಗೃಹಜ್ಯೋತಿ, ಗೃಹಲಕ್ಷ್ಮೀ ಹಾಗೂ ಯುವನಿಧಿ ಇದೆಲ್ಲವನ್ನೂ ಅತ್ಯಂತ ಯಶಸ್ವಿಯಾಗಿ ರಾಜ್ಯದ ಪ್ರತಿಯೊಂದು ಜನಸಾಮಾನ್ಯರಿಗೆ ತಲುಪಿಸಿ ನುಡಿದಂತೆ ನಡೆದಿದ್ದು ಮಾರ್ಚ್ 13 ರ ಬುಧವಾರದಂದು ಉಡುಪಿಯ ಎಂ.ಜಿ.ಎಂ ಮೈದಾನದಲ್ಲಿ ಉಡುಪಿ ಜಿಲ್ಲೆಯ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಗ್ಯಾರಂಟಿ ಸಮಾವೇಶವು ನಡೆಯಲಿದ್ದು ಈ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ರಾಜ್ಯದ ನಾಯಕರು, ಜಿಲ್ಲೆಯ ನಾಯಕರು ಉಪಸ್ಥಿತರಿರುವರು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿದರು.

ಉಡುಪಿ ಜಿಲ್ಲೆಯ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಗ್ಯಾರಂಟಿ ಸಮಾವೇಶದ ಪೂರ್ವಭಾವಿ ಸಭೆಯು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಶುಕ್ರವಾರದಂದು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ನಡೆಯಿತು.

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ 35 ನಗರಸಭಾ ವಾರ್ಡ್ ಹಾಗೂ 4 ಪಂಚಾಯತ್ಗಳಿಗೆ ಉಸ್ತುವಾರಿಗಳ ನೇಮಕ ಮಾಡಿ ಆಯಾ ವಾರ್ಡ್ ಹಾಗೂ ಪಂಚಾಯತ್ಗಳಿಂದ ಗ್ಯಾರಂಟಿ ಫಲಾನುಭವಿಗಳನ್ನು ಮಾರ್ಚ್ 13ರಂದು ನಡೆಯಲಿರುವ ಗ್ಯಾರಂಟಿ ಸಮಾವೇಶಕ್ಕೆ ಕರೆತರುವ ಜವಾಬ್ದಾರಿಯನ್ನು ನೀಡಿ ಗ್ಯಾರಂಟಿ ಫಲಾನುಭವಿಗಳ ಗ್ಯಾರಂಟಿ ಸಮಾವೇಶವನ್ನು ಯಶಸ್ವಿಗೊಳಿಸಲು ಕರೆ ನೀಡಲಾಯಿತು.

ಈ ಪೂರ್ವಭಾವಿ ಸಭೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾದ ಕಿಶನ್ ಹೆಗ್ಡೆ ಕೊಳ್ಕೆಬೈಲು, ಉಡುಪಿ ವಿಧಾನಸಭಾ ಕ್ಷೇತ್ರದ ನಾಯಕರಾದ ಪ್ರಸಾದ್ರಾಜ್ ಕಾಂಚನ್, ನಾಯಕರಾದ ಕುಶಲ್ ಶೆಟ್ಟಿ, ಪ್ರಖ್ಯಾತ್ ಶೆಟ್ಟಿ, ದಿವಾಕರ್ ಕುಂದರ್, ಮಮತಾ ಶೆಟ್ಟಿ, ಸೌರಭ್ ಬಲ್ಲಾಳ್, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ವಿವಿಧ ಘಟಕದ ಅಧ್ಯಕ್ಷರು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರೆಲ್ಲರೂ ಭಾಗವಹಿಸಿದರು.

ಈ ಕಾರ್ಯಕ್ರಮವನ್ನು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಸ್ವಾಗತಿಸಿ ನಿರೂಪಿಸಿದರು. ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಕುಮಾರ್ ಮಂಚಿ ಅವರು ಕಾರ್ಯಕ್ರಮದ ಅಂತ್ಯದಲ್ಲಿ ಧನ್ಯವಾದವನ್ನು ತಿಳಿಸಿದರು.


Spread the love