ಮೀನುಗಾರರ ಸಮಸ್ಯೆಗೆ ಸ್ಪಂದಿಸಲು ಸದಾ ಸಿದ್ಧ – ಪ್ರಮೋದ್ ಮಧ್ವರಾಜ್

Spread the love

ಮೀನುಗಾರರ ಸಮಸ್ಯೆಗೆ ಸ್ಪಂದಿಸಲು ಸದಾ ಸಿದ್ಧ – ಪ್ರಮೋದ್ ಮಧ್ವರಾಜ್

ಉಡುಪಿ: ಮೀನುಗಾರಿಕೆಗೆ ಕೇಂದ್ರ ಮತ್ತು ರಾಜ್ಯ ಸರಕಾರದಿಂದ ಗರಿಷ್ಠ ಅಭಿವೃದ್ಧಿಗೆ ಪ್ರಯತ್ನ ಮಾಡುತ್ತೇನೆ. ನನ್ನನ್ನು ಸಂಸತ್ತಿಗೆ ಆರಿಸಿ ಕಳುಹಿಸಿದರೆ ಕರಾವಳಿ ಮೀನುಗಾರರಿಗೆ ಹೊಸ ಯೋಜನೆಗಳನ್ನು ರೂಪಿಸಿ ಪ್ರಚಲಿತ ಕಾರ್ಯಕ್ರಮವನ್ನು ಅನುಷ್ಠಾನಕ್ಕೆ ತರುವುದರೊಂದಿಗೆ, ಕೇಂದ್ರ ಸರಕಾರದಿಂದ ಹೆಚ್ಚಿನ ಸಬ್ಸಿಡಿಯಲ್ಲಿ ನಾಡದೋಣಿ ಮೀನುಗಾರರಿಗೆ ಸೀಮೆಎಣ್ಣೆ ಸಿಗುವಂತೆ ಪ್ರಯತ್ನಿಸುತ್ತೇನೆ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

ಈ ಕುರಿತು ಮಾಧ್ಯಮ ಹೇಳಿಕೆ ನೀಡಿರುವ ಅವರು ಬಂದರುಗಳ ಅಭಿವೃದ್ಧಿಗೆ ಗರಿಷ್ಠ ಅನುದಾನವನ್ನು ತಂದು ಬಂದರು ಅಭಿವೃದ್ಧಿಗೆ ಪ್ರಯತ್ನಿಸುವುದಲ್ಲದೆ ನಮ್ಮ ಜಿಲ್ಲೆಯಲ್ಲಿ ಮೀನುಗಾರರು ಮೃತಪಟ್ಟಲ್ಲಿ ಕೇಂದ್ರ ಸರಕಾರ 2 ಲಕ್ಷ ನೀಡುತ್ತಿದ್ದು, ಅದನ್ನು ಹೆಚ್ಚಿಸಲು ಪ್ರಯತ್ನಿಸುತ್ತೇನೆ. ಕರ್ನಾಟಕ ರಾಜ್ಯ ಸರಕಾರದ ಮುಖ್ಯಮಂತ್ರಿ ಈಗಾಗಲೇ ಕೃಷಿಕರಿಗೆ ಸಾಲ ಮನ್ನಾ ಮಾಡಿದಂತೆ ಮೀನುಗಾರ ಮಹಿಳೆಯರ ಸಾಲ ಮನ್ನಾ ಮಾಡಲು ಪ್ರಯತ್ನಿಸುತ್ತೇನೆ. ಈಗಾಗಲೇ ರಾಜ್ಯ ಮತ್ತು ಕೇಂದ್ರ ಸರಕಾರ ಪ್ರತೀ ದಿನ ಡಿಸೆಲ್ ಮತ್ತು ಸೀಮೆ ಎಣ್ಣೆ ಸಬ್ಸಿಡಿ 300 ಲೀಟರ್ ನೀಡುತ್ತಿದ್ದು ಅದನ್ನು 500 ಲೀಟರ್ಗೆ ಏರಿಸಲು ಪ್ರಯತ್ನ ಮಾಡುತ್ತೇನೆ. ನನ್ನನ್ನು ಲೋಕಸಭೆಗೆ ಆರಿಸಿ ಕಳುಹಿಸಿದ್ದಲ್ಲಿ ಮೀನುಗಾರರ ಹಿತಕ್ಕಾಗಿ ದುಡಿದು, ಮೀನುಗಾರರ ಸಂಕಷ್ಟಕ್ಕೆ ಸ್ಪಂದಿಸುತ್ತೇನೆ ಎಂದು ಪ್ರಮೋದ್ ಮಧ್ವರಾಜ್ರವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.


Spread the love