ಮೀನುಗಾರಿಕಾ ದೋಣಿ ದುರಂತ ಸ್ಥಳಕ್ಕೆ ಸಂಸದ ಬಿವೈಆರ್ ಭೇಟಿ
ಕುಂದಾಪುರ: ಗಂಗೊಳ್ಳಿ ಮೀನುಗಾರಿಕಾ ದೋಣಿ ದುರಂತ ಸ್ಥಳಕ್ಕೆ ಮಂಗಳವಾರ ಸಂಜೆ ಶಿವಮೊಗ್ಗ ಲೋಕಸಭಾ ಸಂಸದ ಬಿವೈ ರಾಘವೇಂದ್ರ ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿದರು.
ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ದೂರವಾಣಿ ಮೂಲಕ ಸಂಪರ್ಕ ಮಾಡಿದ ಸಂಸದ ಬಿ.ವೈ.ರಾಘವೇಂದ್ರ ಅವರು, ಕಡಲು ಪ್ರಕ್ಷುಬ್ಧವಾಗಿರುವುದರಿಂದ ನಾಪತ್ತೆಯಾಗಿರುವ ಮೀನುಗಾರರ ಪತ್ತೆ ಕಾರ್ಯಾಚರಣೆಗೆ ತೊಡಕಾಗುತ್ತಿದೆ. ಹೀಗಾಗಿ ಕ್ಷಿಪ್ರ ಕಾರ್ಯಾಚರಣೆಗೆ ಅನುಕೂಲವಾಗಲು ಬುಧವಾರ ಬೆಳಗ್ಗೆಯಿಂದಲೇ ಹೆಲಿಕಾಪ್ಟರ್ ಮೂಲಕ ಕಾರ್ಯಾಚರಣೆ ನಡೆಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುವಂತೆ ಸಕಾಲಿಕ ನಿರ್ಧಾರ ಕೈಗೊಳ್ಳುವಂತೆ ಮನವಿ ಮಾಡಿದರು.
ಈ ವೇಳೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಕುತ್ಯಾರು ನವೀನ್ ಕುಮಾರ ಶೆಟ್ಟಿ, ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷೆ ಅನಿತಾ ಆರ್.ಕೆ. ಮರವಂತೆ, ಪ್ರಮುಖರಾದ ದೀಪಕ್ ಕುಮಾರ್ ಶೆಟ್ಟಿ, ಕೃಷ್ಣಪ್ರಸಾದ ಅಡ್ಯಂತಾಯ, ವೆಂಕಟೇಶ ಕಿಣಿ, ಬಿ.ಎಸ್. ಸುರೇಶ್ ಶೆಟ್ಟಿ ಇದ್ದರು.