Home Mangalorean News Kannada News ಮೀನು ಮಾರಾಟ ಫೆಡರೇಷನ್‌ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಮೀನು ಮಾರಾಟ ಫೆಡರೇಷನ್‌ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Spread the love

ಮೀನು ಮಾರಾಟ ಫೆಡರೇಷನ್‌ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್‌ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ 85, ದ್ವಿತೀಯ ಪಿಯುಸಿ ಅಥವಾ ತತ್ಸಮಾನ ತಾಂತ್ರಿಕ ಪರೀಕ್ಷೆಯಲ್ಲಿ ಶೇ 80, ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ 70 ಹಾಗೂ ಅಂತಿಮ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇ 60 ಅಂಕ ಗಳಿಸಿದ ‘ಸಿ’ ವರ್ಗದ ಸದಸ್ಯರ ಮಕ್ಕಳು ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ 90, ದ್ವಿತೀಯ ಪಿಯುಸಿಯಲ್ಲಿ ಶೇ 85, ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ 70 ಅಂಕ ಗಳಿಸಿದ ಸಾಮಾನ್ಯ ವರ್ಗದ ಸದಸ್ಯರ ಪ್ರತಿಭಾವಂತ ಮಕ್ಕಳು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಬಹುದು.

ಮೀನುಗಾರಿಕಾ ಪ್ರಾಥಮಿಕ ಸಹಕಾರಿ ಸಂಘಗಳು ಮತ್ತು ಫೆಡರೇಶನ್‌ನ ಶಾಖಾ ಕಚೇರಿಗಳಿಂದ ಆಗಸ್ಟ್‌ 15ರೊಳಗೆ ಅರ್ಜಿ ನಮೂನೆಯನ್ನು ಪಡೆದುಕೊಂಡು ಅರ್ಜಿ ಸಲ್ಲಿಸಬಹುದು ಎಂದು ಫೆಡರೇಷನ್‌ ಅಧ್ಯಕ್ಷ ಯಶ್‌ಪಾಲ್‌ ಎ. ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

Exit mobile version