ಮೀಲಾದುನ್ನಬಿ ಆಚರಣೆ: ದ.ಕ., ಉಡುಪಿ ಜಿಲ್ಲೆಯಲ್ಲಿ ಆ.25ರಂದು ಸಾರ್ವತ್ರಿಕ ರಜೆ

Spread the love

ಮೀಲಾದುನ್ನಬಿ ಆಚರಣೆ: ದ.ಕ., ಉಡುಪಿ ಜಿಲ್ಲೆಯಲ್ಲಿ ಆ.25ರಂದು ಸಾರ್ವತ್ರಿಕ ರಜೆ

ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಆ.25ರ ಮಂಗಳವಾರ ಮೀಲಾದುನ್ನೆಬಿ ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಉಭಯ ಜಿಲ್ಲಾಡಳಿತಗಳು ಆ.25ರಂದು ಸರ್ಕಾರಿ ಸಾರ್ವತ್ರಿಕ ರಜೆ ಘೋಷಿಸಿ ಆದೇಶ ಹೊರಡಿಸಿವೆ.

ಈ ಹಿಂದೆ ರಾಜ್ಯ ಸರ್ಕಾರವು ಮೀಲಾದುನ್ನೆಬಿ ಪ್ರಯುಕ್ತ ಆ.26ರಂದು ಸಾರ್ವತ್ರಿಕ ರಜೆ ನಿಗದಿಪಡಿಸಿತ್ತು. ಆದರೆ ಇಸ್ಲಾಮಿಕ್ ತಿಂಗಳ ಆರಂಭದ ಚಂದ್ರದರ್ಶನದಲ್ಲಿ ಉಂಟಾದ ವ್ಯತ್ಯಾಸದ ಹಿನ್ನೆಲೆಯಲ್ಲಿ ಪ್ರವಾದಿ ಮುಹಮ್ಮದ್ (ಸ) ಅವರ ಜನ್ಮದಿನವನ್ನು ಆ.25ರಂದು ಆಚರಿಸಲು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಖಾಝಿಗಳು ನಿರ್ಧರಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಉಭಯ ಜಿಲ್ಲೆಗಳ ವಿವಿಧ ಮುಸ್ಲಿಂ ಸಂಘಟನೆಗಳ ಮುಖಂಡರು ಆ.26ರ ಬದಲಿಗೆ ಆ.25ರಂದು ಸಾರ್ವತ್ರಿಕ ರಜೆ ನೀಡುವಂತೆ ಆರೋಗ್ಯ ಸಚಿವ ಯು.ಟಿ.ಖಾದರ್ ಅವರಿಗೆ ಮನವಿ ಮಾಡಿದ್ದರು.

ಮನವಿಗೆ ಸ್ಪಂದಿಸಿದ ಸಚಿವ ಯು.ಟಿ.ಖಾದರ್ ಅವರು ಆ.25ರಂದು ರಜೆ ಘೋಷಿಸುವಂತೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾಧಿಕಾರಿಗಳು ಮತ್ತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದರು. ಅದರಂತೆ ಉಭಯ ಜಿಲ್ಲೆಗಳಲ್ಲಿ ಆ.25ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ.


Spread the love
Subscribe
Notify of

0 Comments