Home Mangalorean News Kannada News ಮೂಡಬಿದರೆಯಲ್ಲಿ ಪ್ರಶಾಂತ್ ಪೂಜಾರಿ ಹತ್ಯೆ ಆರೋಪಿಯ ಕೊಲೆ ಯತ್ನ

ಮೂಡಬಿದರೆಯಲ್ಲಿ ಪ್ರಶಾಂತ್ ಪೂಜಾರಿ ಹತ್ಯೆ ಆರೋಪಿಯ ಕೊಲೆ ಯತ್ನ

Spread the love

ಮೂಡಬಿದರೆಯಲ್ಲಿ ಪ್ರಶಾಂತ್ ಪೂಜಾರಿ ಹತ್ಯೆ ಆರೋಪಿಯ ಕೊಲೆ ಯತ್ನ

ಮೂಡುಬಿದಿರೆ: ದುಷ್ಕರ್ಮಿಗಳ ತಂಡವೊಂದು ಯುವಕನೋರ್ವನ ಮೇಲೆ ತಲವಾರು ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಮೂಡಬಿದರೆ ಸಮೀಪದ ಗಂಟಾಲ್ ಕಟ್ಟೆ ಎಂಬಲ್ಲಿ ನಡೆದಿದೆ.

ಹಲ್ಲೆಗೊಳಗಾದ ಯುವಕನ್ನು ಇಮ್ತಿಯಾಝ್(32) ಎಂದು ಗುರುತಿಸಲಾಗಿದೆ. ಹಲ್ಲೆಗೊಳಗಾದ ಯುವಕ 2015ರಲ್ಲಿ ಮೂಡಬಿದರೆಯಲ್ಲಿ ನಡೆದ ಸಂಘಪರಿವಾರದ ಕಾರ್ಯಕರ್ತ ಪ್ರಶಾಂತ್ ಪೂಜಾರಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಎನ್ನಲಾಗಿದೆ.

ಸೋಮವಾರ ಬೆಳಗ್ಗೆ ಇಮ್ತಿಯಾಝ್ ಹೊಟೇಲ್ನಲ್ಲಿದ್ದ ವೇಳೆ 8 ಮಂದಿಯ ತಂಡ ಆಗಮಿಸಿ ಈ ಕ್ಯತ್ಯ ಎಸಗಿದೆ ಎಂದು ತಿಳಿದುಬಂದಿದೆ. ದುಷ್ಕರ್ಮಿಗಳ ತಂಡವು ಹೋಟೆಲ್ನಲ್ಲಿ ಕುಳಿತು ಇಮ್ತಿಯಾಝ್ ಅವರಲ್ಲಿ ಚಹಾ ಕೇಳಿದೆ. ಅದರಂತೆ ಚಹಾ ಮಾಡಲು ಅವರು ಹೊಟೇಲ್ ಒಳಗೆ ಹೋಗುತ್ತಿದ್ದಂತೆ ಹಿಂದಿನಿಂದ ತಲಾವರು ದಾಳಿ ನಡೆಸಿದೆ. ಇದರಿಂದ ಇಮ್ತಿಯಾಝ್ರ ತಲೆ, ಕೈ ಹಾಗೂ ಬೆನ್ನಿಗೆ ಗಾಯಗಳಾಗಿವೆ.

ಬಳಿಕ ಅವರು ಹೋಟೇಲ್ ಹಿಂಬಾಗಿಲಿನಿಂದ ಓಡಿ ಸಮೀಪದ ಮನೆಯೊಂದಕ್ಕೆ ನುಗ್ಗಿ ದುಷ್ಕರ್ಮಿಗಳಿಂದ ಪಾರಾಗಿದ್ದಾರೆ. ಗಂಭೀರ ಗಾಯಗೊಂಡಿರುವ ಇಮ್ತಿಯಾಝ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೂಡಬಿದರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ


Spread the love

Exit mobile version