Spread the love
ಮೂಡಬಿದಿರೆ| ಪೆಟ್ರೋಲ್ ಬಂಕ್ ಬಳಿ ಭೀಕರ ಅಪಘಾತ: ತಾಯಿ – ಮಗ ಮೃತ್ಯು
ಮೂಡುಬಿದಿರೆ: ಸಮೀಪದ ಪೆಟ್ರೋಲ್ ಬಂಕ್ ಬಳಿ ಮಂಗಳವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಮತ್ತು ಮಗ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತರನ್ನು ಮೂಡುಬಿದಿರೆ ತಾಲೂಕಿನ ಗಂಟಾಲ್ಕಟ್ಟೆ ನೀರಲ್ಕೆ ನಿವಾಸಿಗಳಾದ ಪ್ರೇಮಾ ಹಾಗೂ ಅವರ ಪುತ್ರ ಸೀನ ಎಂದು ಗುರುತಿಸಲಾಗಿದೆ.
ಮೂಡುಬಿದಿರೆಯಿಂದ ಗಂಟಾಲ್ಕಟ್ಟೆ ಕಡೆಗೆ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ, ರಸ್ತೆ ಬದಿ ನಿಂತಿದ್ದ ಲಾರಿಗೆ ಅವರ ದ್ವಿಚಕ್ರ ವಾಹನ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದ್ದು, ಅಪಘಾತದ ತೀವ್ರತೆಗೆ ಪ್ರೇಮಾ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಸೀನ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂಬಂಧ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Spread the love













