ಮೂಡುಬಿದಿರೆ: ಅಕ್ರಮ ಗೋ ಸಾಗಾಟ ತಡೆಯಲು ಪೊಲೀಸರಿಂದ ಗುಂಡು ಹಾರಾಟ

Spread the love

ಮೂಡುಬಿದಿರೆ: ಅಕ್ರಮ ಗೋ ಸಾಗಾಟ ತಡೆಯಲು ಪೊಲೀಸರಿಂದ ಗುಂಡು ಹಾರಾಟ

ಮೂಡುಬಿದಿರೆ : ಕಾರಿನಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದವರನ್ನು ತಡೆಯುವ ಯತ್ನದಲ್ಲಿ ಪೊಲೀಸರು ಗಾಳಿಯಲ್ಲಿ ಗುಂಡು ಹಾರಾಟ ನಡೆಸಿದ ಘಟನೆ ಇಲ್ಲಿನ ಹೌದಾಲ್ ಎಂಬಲ್ಲಿ ರವಿವಾರ ಮುಂಜಾನೆ ನಡೆದಿರುವುದು ವರದಿಯಾಗಿದೆ.

ಈ ಸಂದರ್ಭ ಆರೋಪಿಗಳು ಕಾರನ್ನು ಬಿಟ್ಟು ಪರಾರಿಯಾಗಿದ್ದು, ಅದರಲ್ಲಿದ್ದ ಆರು ದನಗಳನ್ನು ರಕ್ಷಿಸಿರುವ ಪೊಲೀಸರು ಕಾರನ್ನು ವಶಕ್ಕೆ ಪಡೆದಿದ್ದಾರೆ.

ಇಂದು ಮುಂಜಾವ 4:30ರ ಸುಮಾರಿಗೆ ಶಿರ್ತಾಡಿ ಕಡೆಯಿಂದ ಬರುತ್ತಿದ್ದ ಕಾರೊಂದರನ್ನು ಪೊಲೀಸರು ತಪಾಸಣೆಗಾಗಿ ನಿಲ್ಲಿಸಲು ಯತ್ನಿಸಿದ್ದಾರೆ. ಈ ವೇಳೆ ಅದರಲ್ಲಿದ್ದವರು ಕಾರನ್ನು ನಿಲ್ಲಿಸಿದೆ ಪೊಲೀಸರ ವಾಹನಕ್ಕೆ ಢಿಕ್ಕಿ ಹೊಡೆಯಲು ಯತ್ನಿಸಿ ಪರಾರಿಯಾಗಲು ಯತ್ನಿಸಿದರೆನ್ನಲಾಗಿದೆ. ಈ ವೇಳೆ ಬೆನ್ನಟ್ಟಿದ ಮೂಡುಬಿದಿರೆ ವೃತ್ತ ನಿರೀಕ್ಷಕ ಬಿ.ಎಸ್.ದಿನೇಶ್ ಕುಮಾರ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಇದರಿಂದ ಬೆದರಿದ ಕಾರಿನಲ್ಲಿದ್ದವರು ವಾಹನ ಮತ್ತು ದನಗಳನ್ನು ಬಿಟ್ಟು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.


Spread the love