ಮೂಡುಬಿದಿರೆ: ಮಿನಿ ಗೂಡ್ಸ್ ಟೆಂಪೋಗೆ KSRTC ಬಸ್‌ ಢಿಕ್ಕಿ- ಟೆಂಪೊ ಚಾಲಕ ಸ್ಥಳದಲ್ಲೇ ಮೃತ್ಯು

Spread the love

ಮೂಡುಬಿದಿರೆ: ಮಿನಿ ಗೂಡ್ಸ್ ಟೆಂಪೋಗೆ KSRTC ಬಸ್‌ ಢಿಕ್ಕಿ- ಟೆಂಪೊ ಚಾಲಕ ಸ್ಥಳದಲ್ಲೇ ಮೃತ್ಯು

ಕಾರ್ಕಳ–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಸಮೀಪ ಕೆಎಸ್‌ಆರ್‌ಟಿಸಿ ಬಸ್ಸೊಂದು ಗೂಡ್ಸ್ ಮಿನಿ ಟೆಂಪೋಗೆ ಢಿಕ್ಕಿ ಹೊಡೆದ ಪರಿಣಾಮ ಟೆಂಪೋ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ.

ಬಂಟ್ವಾಳ ತಾಲೂಕು ಕೆಲಿಂಜೆ ನಿವಾಸಿ ಲೆಸ್ಟರ್ ಡೇವಿಡ್ ಡಿ’ಸೋಜ (30 ) ಮೃತಪಟ್ಟವರು.

ಮೂಡುಬಿದಿರೆಯಿಂದ ಕಾರ್ಕಳ ಕಡೆಗೆ ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ವಿರುದ್ಧ ದಿಕ್ಕಿನಲ್ಲಿ ಬಂದು ಕಾರ್ಕಳ ಕಡೆಯಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಮಿನಿ ಗೂಡ್ಸ್ ಟೆಂಪೋಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಟೆಂಪೋ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದೀಗ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಸೂಕ್ತ ರೀತಿಯಲ್ಲಿ ರಸ್ತೆ ಡೈವರ್ಷನ್ ವ್ಯವಸ್ಥೆ ಮಾಡದೇ ಇರುವುದರಿಂದ ಈ ಭಾಗದಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments