ಮೂಲ್ಕಿ ರೈಲು ಹಳಿಯ ಮೇಲೆ ಅಪರಿಚಿತ ವ್ಯಕ್ತಿಯ ಶವ ಪತ್ತೆ

Spread the love

ಮೂಲ್ಕಿ ರೈಲು ಹಳಿಯ ಮೇಲೆ ಅಪರಿಚಿತ ವ್ಯಕ್ತಿಯ ಶವ ಪತ್ತೆ
ಮಂಗಳೂರು: ಮೂಲ್ಕಿ ರೈಲ್ವೆ ನಿಲ್ದಾಣದ ಬಳಿಯ ರೈಲ್ವೆ ಹಳಿಯಲ್ಲಿ ಅಪರಿಚಿತ ವ್ಯಕ್ತಿಯೋರ್ವರ ಮೃತದೇಹ ಗುರುವಾರ ಪತ್ತೆಯಾಗಿದೆ.
ವ್ಯಕ್ತಿಯ ಸುಮಾರು 35-40 ವರ್ಷ ವಯಸ್ಸಿನವರಾಗಿದ್ದು ಮೃತ ವ್ಯಕ್ತಿಯ ಕಿಸೆಯಲ್ಲಿ ಮಡಗಾಂವ್ – ಮಂಗಳೂರು ಮತ್ತು ಮಂಗಳೂರು-ಮಡಗಾಂವ್ ಹೋಗುವ ರೈಲಿನ ಎರಡು ಟೀಕೇಟ್ ಪತ್ತೆಯಾಗಿದ್ದು, ಆಕಸ್ಮಿಕವಾಗಿ ರೈಲಿನಿಂದ ಬಿದ್ದು ಸಾವನಪ್ಪಿದ್ದಾರೆಯೇ ಅಥವಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಎನ್ನುವ ಕುರಿತು ಮಾಹಿತಿ ಇಲ್ಲ.
ಈ ಕುರಿತು ಮೂಲ್ಕಿ ರೈಲ್ವೆ ನಿಲ್ದಾಣದ ಸ್ಟೇಶನ್ ಮಾಸ್ಟರ್ ನಿರ್ಮಲ ಅವರು ಮೂಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Spread the love