ಯುವಕನ ಮೇಲೆ ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳ ತಂಡದಿಂದ ದಾಳಿ
ಮಂಗಳೂರು: ನಗರದ ಹೊರವಲಯದಲ್ಲಿ ಯುವಕನ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ಸೋಮವಾರ ಸಂಜೆ ನಡೆದಿದೆ.

ಮಂಗಳೂರು ಹೊರವಲಯದ ಬಜಪೆ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದ್ದು ಪೂಪಾಡಿಕಲ್ಲು ನಿವಾಸಿ ಅಕಿಲೇಶ್ ಮೇಲೆ ದಾಳಿಯಾಗಿದ್ದು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ.
ಅಕಿಲೇಶ್ ಬೈಕ್ ನಲ್ಲಿ ಮಾರಕಾಸ್ತ್ರ ಹಿಡಿದು ಸಾಗುತ್ತಿದ್ದವರ ಮೊಬೈಲ್ ನಲ್ಲಿ ವಿಡಿಯೋ ಮಾಡಿದ್ದ ಎನ್ನಲಾಗಿದ್ದು ವಿಡಿಯೋ ಮಾಡಿದ್ದನ್ನು ಆಕ್ಷೇಪಿಸಿ ಬೈಕ್ ನಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಅಕಿಲೇಶ್ ಮೇಲೆ ತಲವಾರು ಬೀಸಿದ್ದಾರೆ ಎನ್ನಲಾಗಿದೆ.
ಗಾಯಗೊಂಡ ಅಕಿಲೇಶ್ ಮೂಡಬಿದ್ರೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಬಜಪೆ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಆರಂಭಿಸಿದ್ದಾರೆ.