ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ ಮೈಸೂರಿನ ಮೇಘನಾಗೆ 465 ನೇ ಸ್ಥಾನ

Spread the love

ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ ಮೈಸೂರಿನ ಮೇಘನಾಗೆ 465 ನೇ ಸ್ಥಾನ

ಮೈಸೂರು: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ದೇಶದ ಅತ್ಯುನ್ನತ ನಾಗರೀಕ ಸೇವೆಗಳ ನೇಮಕಕ್ಕೆ 2019ನೇ ಸಾಲಿನಲ್ಲಿ ನಡೆಸಿದ ಪರೀಕ್ಷೆಯಲ್ಲಿ ಮೈಸೂರು ಮೂಲದ ಕೆ.ಟಿ. ಮೇಘನಾ 465ನೇ ರ್ಯಾಂಕ್ ಪಡೆದು ಸಾಧನೆ ಮಾಡಿದ್ದಾರೆ.

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕುಡುಕೂರು ನಿವಾಸಿಯಾಗಿರುವ ಹಾಲಿ ಬೆಂಗಳೂರಿನ ಕೆಂಗೇರಿಯಲ್ಲಿ ವಾಸವಾಗಿರುವ ತಾಂಡವಮೂರ್ತಿ ಹಾಗೂ ನವನೀತ ದಂಪತಿ ಪುತ್ರಿ ಮೇಘನಾ, ಅವರಿಗೆ ಪೂರ್ಣ ಪ್ರಮಾಣದಲ್ಲಿ ದೃಷ್ಠಿ ಸಮಸ್ಯೆ ಎದುರಿಸುತ್ತಿದ್ದಾರೆ. 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವೇಳೆ ರೆಟಿನಾ ಸಮಸ್ಯೆ ಎದುರಾಗಿ, ಶೇ.70ರಷ್ಟು ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದರು. ಆದರೆ ತಮ್ಮಗಿರುವ ಅಂಗವೈಕಲ್ಯವನ್ನು ಮೆಟ್ಟಿನಿಂತು ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಸಾಧನೆ ಮಾಡಿದ್ದಾರೆ.

ತಮ್ಮ ಶಾಲಾ-ಕಾಲೇಜು ಶಿಕ್ಷಣವನ್ನು ಬೆಂಗಳೂರಿನಲ್ಲಿ ಮುಗಿಸಿದ್ದ ಮೇಘನಾ, 2015ನೇ ಬ್ಯಾಚ್ನಲ್ಲಿ 11ನೇ ರ್ಯಾಂಕ್ ನಲ್ಲಿ ಕೆಎಎಸ್ ಪರೀಕ್ಷೆಯಲ್ಲಿ ಪಾಸಾಗಿದ್ದರು. ಸದ್ಯ ಮೂರು ತಿಂಗಳಿನಿಂದ ಬೆಂಗಳೂರಿನಲ್ಲಿ ಖಜಾನೆ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಮಗಳ ಸಾಧನೆ ಬಗ್ಗೆ ತಂದೆ ತಾಂಡವಮೂರ್ತಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.


Spread the love