Spread the love
ಯೋನೆಕ್ಸ್ ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ಬ್ಯಾಡ್ಮಿಂಟನ್ ಕ್ರೀಡಾಕೂಟ ಯಶಸ್ವಿ
ಮಂಗಳೂರು: ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ವತಿಯಿಂದ ಸೆಪ್ಟೆಂಬರ್ 27ರಂದು ಆಯೋಜಿಸಲಾಗಿದ್ದ ಯೋನೆಕ್ಸ್ ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ಸಬ್ ಜೂನಿಯರ್ ಹಾಗೂ ಜೂನಿಯರ್ ಬ್ಯಾಡ್ಮಿಂಟನ್ ಕ್ರೀಡಾಕೂಟವು ಅಸೋಸಿಯೇಷನ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿಯವರ ಮುಂದಾಳತ್ವದಲ್ಲಿ ಯಶಸ್ವಿಯಾಗಿ ನಡೆಯಿತು.

ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸಬ್ ಜೂನಿಯರ್ ಹಾಗೂ ಜೂನಿಯರ್ ವಿಭಾಗದ ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.
ಯುವ ಬ್ಯಾಡ್ಮಿಂಟನ್ ಪ್ರತಿಭೆಗಳಿಗೆ ಉತ್ತಮ ವೇದಿಕೆಯಾಗಿದ್ದ ಈ ಕ್ರೀಡಾಕೂಟವು, ಕ್ರೀಡಾಪಟುಗಳಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವುದರ ಜೊತೆಗೆ ಬ್ಯಾಡ್ಮಿಂಟನ್ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆ ಮಾಡಲು ಪ್ರೇರಣೆ ನೀಡಿತು.
Spread the love












