ರಾಜ್ಯದಲ್ಲಿ ಲಾಕ್ ಡೌನ್ 2 ವಾರ ವಿಸ್ತರಣೆ, ಆದರೆ  ವಿಭಿನ್ನವಾಗಿರಲಿದೆ – ಯಡ್ಯೂರಪ್ಪ

Spread the love

ರಾಜ್ಯದಲ್ಲಿ ಲಾಕ್ ಡೌನ್ 2 ವಾರ ವಿಸ್ತರಣೆ, ಆದರೆ  ವಿಭಿನ್ನವಾಗಿರಲಿದೆ – ಯಡ್ಯೂರಪ್ಪ

ಬೆಂಗಳೂರು: ಮಹಾಮಾರಿ ಕೊರೋನಾ ವೈರಸ್ ಹರಡುವುದನ್ನು ನಿಯಂತ್ರಿಸುವುದಕ್ಕಾಗಿ ರಾಜ್ಯದಲ್ಲಿ ಏಪ್ರಿಲ್ 30ರ ವರೆಗೆ ಲಾಕ್ ವಿಸ್ತರಿಸುವುದು ಅನಿವಾರ್ಯವಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಶನಿವಾರ ಹೇಳಿದ್ದಾರೆ.

ಇಂದು ಪ್ರಧಾನಿ ನರೇಂದ್ರ ಮೋದಿ ಅವರು ನಡೆಸಿದ ವಿಡಿಯೋ ಕಾನ್ಫೆರೆನ್ಸ್ ನಲ್ಲಿ ಭಾಗವಹಿಸಿದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ಪ್ರಧಾನಿ ಮೋದಿ ಅವರು ಸುಮಾರು 4 ಗಂಟೆಗಳ ಕಾಲ ಎಲ್ಲಾ ರಾಜ್ಯಗಳ ಸಿಎಂಗಳಿಂದ ರಾಜ್ಯಗಳ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದುಕೊಂಡರು. ದೇಶದಲ್ಲಿ ಕೊವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಮತ್ತು ಸಮುದಾಯಕ್ಕೆ ಹರಡುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು ಎಂದರು.

ಕೊರೋನಾ ವೈರಸ್ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನು ಎರಡು ವಾರಗಳ ಕಾಲ ಲಾಕ್ ಡೌನ್ ಅನಿವಾರ್ಯವಾಗಿದೆ. ಯಾವುದೇ ಕಾರಣಕ್ಕೂ ಲಾಕ್ ಡೌನ್ ಸಡಿಲ ಆಗಬಾರದು ಎಂದು ಪ್ರಧಾನಿಗಳು ಸೂಚಿಸಿರುವುದಾಗಿ ತಿಳಿಸಿದರು.

ಮುಂದಿನ ಎರಡು ವಾರಗಳ ಲಾಕ್ ಡೌನ್ ವಿಭಿನ್ನವಾಗಿರಲಿದ್ದು, ಈ ಕುರಿತು ಕೇಂದ್ರ ಸರ್ಕಾರ ಇನ್ನು ಎರಡ್ಮೂರು ದಿನದಲ್ಲಿ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಿದೆ.

ಏಪ್ರಿಲ್ 10ರಿಂದ ಮೀನುಗಾರಿಕೆ, ಮೀನು ಸಂಸ್ಕರಣಕ್ಕೆ ಲಾಕ್ ಡೌನ್ ನಿಂದ ವಿನಾಯ್ತಿ ನೀಡಲಾಗಿದೆ ಎಂದು ಪ್ರಧಾನಿಗಳು ತಿಳಿಸಿದ್ದು, ಇದರಿಂದ ಕರಾವಳಿಯಲ್ಲಿ ಮೀನುಗಾರಿಕೆಗೆ ಸಹಕಾರಿಯಾಗಲಿದೆ ಎಂದರು.


Spread the love