ರಾಜ್ಯದಲ್ಲಿ ಹಿಜಾಬ್​ ನಿಷೇಧ ಆದೇಶ ಇನ್ನೂ ವಾಪಸ್​​ ಪಡೆದಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

Spread the love

ರಾಜ್ಯದಲ್ಲಿ ಹಿಜಾಬ್​ ನಿಷೇಧ ಆದೇಶ ಇನ್ನೂ ವಾಪಸ್​​ ಪಡೆದಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು: ರಾಜ್ಯದಲ್ಲಿ ಹಿಜಾಬ್ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ರಾಜ್ಯ ರಾಜಕೀಯ ನಾಯಕರು ಸಾಕಷ್ಟು ವಿರೋಧ ವ್ಯಕ್ತಪಡಿಸುತ್ತಿರುವ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಹಿಜಾಬ್​ ನಿಷೇಧ ಆದೇಶ ಇನ್ನೂ ವಾಪಸ್​​ ಪಡೆದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರೋ ಒಬ್ಬರು ಪ್ರಶ್ನೆ ಮಾಡಿದ್ದಕ್ಕೆ ಆ ಉತ್ತರ ಕೊಟ್ಟಿದ್ದೇನೆ. ಹಿಜಾಬ್ ನಿಷೇಧ ಆದೇಶ ವಾಪಸ್​ಗೆ ಯೋಚನೆ ಮಾಡಿದ್ದೇವೆ. ಸರ್ಕಾರದಲ್ಲಿ ಈ ಬಗ್ಗೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಹೇಳಿದ್ದಾರೆ.


Spread the love