Home Mangalorean News Kannada News ರಾಜ್ಯ ಮತ್ತು ಜಿಲ್ಲಾ, ತಾಲ್ಲೂಕು ಗ್ಯಾರಂಟಿ ಜಾರಿ ಸಮಿತಿಗಳಲ್ಲಿ ಬದಲಾವಣೆ ಇಲ್ಲ: ಸಿಎಂ  ಸಿದ್ದರಾಮಯ್ಯ

ರಾಜ್ಯ ಮತ್ತು ಜಿಲ್ಲಾ, ತಾಲ್ಲೂಕು ಗ್ಯಾರಂಟಿ ಜಾರಿ ಸಮಿತಿಗಳಲ್ಲಿ ಬದಲಾವಣೆ ಇಲ್ಲ: ಸಿಎಂ  ಸಿದ್ದರಾಮಯ್ಯ

Spread the love

ರಾಜ್ಯ ಮತ್ತು ಜಿಲ್ಲಾ, ತಾಲ್ಲೂಕು ಗ್ಯಾರಂಟಿ ಜಾರಿ ಸಮಿತಿಗಳಲ್ಲಿ ಬದಲಾವಣೆ ಇಲ್ಲ: ಸಿಎಂ  ಸಿದ್ದರಾಮಯ್ಯ

  • ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ: ಸಿಎಂ
  • ಅಧಿವೇಶನ ಮುಗಿಯುತ್ತಿದ್ದಂತೆ ಈ ಬಗ್ಗೆ ಸಭೆ ಕರೆದು ತಕರಾರುಗಳನ್ನು ಪರಿಹರಿಸಲಾಗುವುದು: ಸಿಎಂ

ಬೆಂಗಳೂರು: ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದರು.ಅಧಿವೇಶನ ಮುಗಿಯುತ್ತಿದ್ದಂತೆ ಈ ಬಗ್ಗೆ ಸಭೆ ಕರೆದು ತಕರಾರುಗಳನ್ನು ಪರಿಹರಿಸಲಾಗುವುದು ಎಂದರು.

ಅಧಿಕಾರಕ್ಕೆ ಬಂದಾಗ ಪಕ್ಷದ ಕಾರ್ಯಕರ್ತರಿಗೆ ಅಧಿಕಾರದಲ್ಲಿ ಅವಕಾಶ ನೀಡುವುದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಮಹಾರಾಷ್ಟ್ರದಲ್ಲಿ ಎಲ್ಲಾ ಶಾಸಕರ ಕಚೇರಿಗೂ RSS ಕಾರ್ಯಕರ್ತರನ್ನು ನೇಮಿಸಿಕೊಳ್ಳುತ್ತಿರುವದನ್ನು ಉಲ್ಲೇಖಿಸಿದರು.

ತಾಲ್ಲೂಕುಗಳಲ್ಲಿ ಶಾಸಕರ ಘನತೆಗೆ, ಅಧಿಕಾರಕ್ಕೆ ಯಾವುದೇ ಚ್ಯುತಿ ಬರುವುದಿಲ್ಲ. ಈ ಬಗ್ಗೆ ಎಲ್ಲಾ ಜಿಲ್ಲಾಡಳಿತಕ್ಕೂ ಸೂಚನೆ ನೀಡಲಾಗಿದೆ ಎಂದರು.

ರಾಜ್ಯ ಮತ್ತು ಜಿಲ್ಲಾ, ತಾಲ್ಲೂಕು ಗ್ಯಾರಂಟಿ ಜಾರಿ ಸಮಿತಿಗಳಲ್ಲಿ ಬದಲಾವಣೆ ಇಲ್ಲ ಎಂದು ಇದೇ ಸಂದರ್ಭದಲ್ಲಿ ಸಿಎಂ ಸ್ಪಷ್ಟಪಡಿಸಿದರು.


Spread the love

Exit mobile version