ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಗೀತಾ ವಾಗ್ಳೆ ನೇಮಕ
ಉಡುಪಿ: ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅಲ್ಕಾ ಲಾಂಬಾ ಅವರ ಅನುಮೋದನೆಯ ಮೇರೆಗೆ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಸೌಮ್ಯ ರೆಡ್ಡಿ ಅವರ ಆದೇಶದಂತೆ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಗೀತಾ ವಾಗ್ಳೆ ಅವರನ್ನು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಗೀತಾ ವಾಗ್ಳೆ ಅವರು ಒಬ್ಬ ಸಾಮಾಜಿಕ ಕಾರ್ಯಕರ್ತೆಯಾಗಿದ್ಧು,ಹಲವಾರು ಸಂಘಸಂಸ್ಥೆಗಳಲ್ಲಿ ಸಕ್ರಿಯವಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು ,ಹಲವಾರು ವರ್ಷಗಳಿಂದ ರಾಜಕೀಯವಾಗಿಯೂ ತಮ್ಮನ್ನು ತೊಡಗಿಸಿಕೊಂಡವರು.ಕಾಪು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ,ಶಿರ್ವ ಗ್ರಾಮದ ಪಂಚಾಯತ್ ಸದಸ್ಯರಾಗಿ,ಉಡುಪಿ ಹಾಗೂ ಕಾಪು ತಾಲೂಕು ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿರುವ ಗೀತಾ ವಾಗ್ಳೆಯವರು ಪ್ರಸ್ತುತ ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.