ರೆಡ್‌ಕ್ರಾಸ್ ಶತಮಾನೋತ್ಸವ ಕಟ್ಟಡ ಮಾದರಿ: ಸಚಿವ ದಿನೇಶ್ ಗುಂಡೂರಾವ್ ಶ್ಲಾಘನೆ

Spread the love

ರೆಡ್‌ಕ್ರಾಸ್ ಶತಮಾನೋತ್ಸವ ಕಟ್ಟಡ ಮಾದರಿ: ಸಚಿವ ದಿನೇಶ್ ಗುಂಡೂರಾವ್ ಶ್ಲಾಘನೆ

ಮಂಗಳೂರು: ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ (ಐಆರ್‌ಸಿಎಸ್) ದ.ಕ.ಜಿಲ್ಲಾ ಸಮಿತಿಯ ವತಿಯಿಂದ ಮಂಗಳೂರು ನಗರದ ಹಳೆ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ನಿರ್ಮಾಣವಾಗಿರುವ ರೆಡ್ ಕ್ರಾಸ್ ಶತಮಾನೋತ್ಸವ ಕಟ್ಟಡವನ್ನು ಶುಕ್ರವಾರ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲಾ ಕೇಂದ್ರದಲ್ಲಿ ದ.ಕ.ರೆಡ್ ಕ್ರಾಸ್ ಸಂಸ್ಥೆ ಸಭಾಂಗಣ ಸಹಿತ ಸುಸಜ್ಜಿತ ಕಟ್ಟಡ ನಿರ್ಮಿಸುವ ಮೂಲಕ ರಾಜ್ಯಕ್ಕೆ ಮಾದರಿಯಾಗಿದೆ. ರೆಡ್ ಕ್ರಾಸ್‌ನ ಸೇವಾಕಾರ್ಯಗಳಿಗೆ ನೂತನ ಕಟ್ಟಡ ಇನ್ನಷ್ಟು ಶಕ್ತಿ ನೀಡಲಿ ಎಂದು ಸಚಿವರು ಹಾರೈಸಿದರು.

ರೆಡ್ ಕ್ರಾಸ್ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಸಚಿವರನ್ನು ಗೌರವಿಸಿದರು. ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ರೆಡ್‌ಕ್ರಾಸ್ ಶತಮಾನೋತ್ಸವ ಕಟ್ಟಡ ಸಮಿತಿಯ ಅಧ್ಯಕ್ಷ ಪುಷ್ಪರಾಜ್ ಜೈನ್, ಕೋಶಾಧಿಕಾರಿ ಮೋಹನ್ ಶೆಟ್ಟಿ ಕೆ., ಕಾರ್ಯದರ್ಶಿ ಕಿಶೋರ್‌ಚಂದ್ರ ಹೆಗ್ಡೆ, ನಿರ್ದೇಶಕರಾದ ಯತೀಶ್ ಬೈಕಂಪಾಡಿ, ಡಾ.ಸಚ್ಚಿದಾನಂದ ರೈ, ಪಿ.ಬಿ.ಹರೀಶ್ ರೈ, ಮಾಜಿ ಕಾರ್ಪೋರೇಟರ್ ಎ.ಸಿ.ವಿನಯರಾಜ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ, ವೆನ್ಲಾಕ್ ಆಸ್ಪತ್ರೆ ಜಿಲ್ಲಾ ವೈದ್ಯಾಧಿಕಾರಿ ಡಾ.ಶಿವಪ್ರಕಾಶ್ ಡಿ.ಎಸ್.ಉಪಸ್ಥಿತರಿದ್ದರು.


Spread the love