ರೆಡ್ ಅಲರ್ಟ್ ಹಿನ್ನಲೆ : ನಾಳೆ (ಆ.29) ದ.ಕ. ಜಿಲ್ಲಾದ್ಯಂತ ಶಾಲೆ, ಪಿಯು ಕಾಲೇಜುಗಳಿಗೆ ರಜೆ
ಮಂಗಳೂರು: ಹವಾಮಾನ ಇಲಾಖೆಯು ದ.ಕ.ಜಿಲ್ಲೆಗೆ ಆ.29ರಂದು ರೆಡ್ ಅಲರ್ಟ್ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ಆ.29ರಂದು (ಶುಕ್ರವಾರ) ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೊಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.