Home Mangalorean News Kannada News ರೌಡಿ ಟಾರ್ಗೆಟ್ ಇಲ್ಯಾಸ್ ಕೊಲೆ

ರೌಡಿ ಟಾರ್ಗೆಟ್ ಇಲ್ಯಾಸ್ ಕೊಲೆ

Spread the love

ರೌಡಿ ಟಾರ್ಗೆಟ್ ಇಲ್ಯಾಸ್ ಕೊಲೆ

ಮಂಗಳೂರು: ಉಳ್ಳಾಲ ಟಾರ್ಗೆಟ್ ಗ್ರೂಪ್‌ನ ಕುಖ್ಯಾತ ರೌಡಿ ಇಲ್ಯಾಸ್‌ನನ್ನು ಶನಿವಾರ ಬೆಳಿಗ್ಗೆ 9ರ ಸುಮಾರಿಗೆ ಜೆಪ್ಪು ಕುಡ್ಪಾಡಿಯಲ್ಲಿ ಇಬ್ಬರು ದುಷ್ಕರ್ಮಿಗಳು ಆತನ ಎದೆಗೆ ಚಾಕುವಿನಿಂದ ಇರಿದು ಕೊಲೆ‌ ಮಾಡಿದ್ದಾರೆ.

ಮಂಗಳೂರಿನ ಇಲ್ಯಾಸ್ ಫ್ಲಾಟ್‍ನಲ್ಲಿ ಮಲಗಿದ್ದ ಸಮಯದಲ್ಲಿ ಮುಂಜಾನೆ ಇಬ್ಬರು ಆಗಂತುಕರು ಮನೆಗೆ ನುಗ್ಗಿ ಕೊಚ್ಚಿ ಕೊಲೆಗೈದಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ್ದ ಆರೋಪದ ಮೇಲೆ ಒಂದೂವರೆ ತಿಂಗಳ ಹಿಂದೆಯಷ್ಟೆ ಜೈಲು ಸೇರಿದ್ದ ಇಲಿಯಾಸ್, 2 ದಿನಗಳ ಹಿಂದೆ ಜೈಲಿನಿಂದ ಬಿಡುಗಡೆಯಾಗಿ ಮನೆಗೆ ಬಂದಿದ್ದ. ಹೀಗಾಗಿ ಆತ ಮನೆಯಲ್ಲಿ ಒಬ್ಬನೇ ಇರುವುದರ ಮಾಹಿತಿ ಪಡೆದು ಆಗಂತುಕರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಮೃತದೇಹವನ್ನು ಫ್ಲ್ಯಾಟ್‌ನಿಂದ ಕಂಕನಾಡಿ ಫಾದರ್ ಮುಲ್ಲರ್ಸ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.

ವಿರೋಧಿ ಗುಂಪಿನ ರೌಡಿಗಳು ಕೊಲೆ ಮಾಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಪಾಂಡೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


Spread the love

Exit mobile version