ಲಾಕ್ಡೌನ್ ಭವಿಷ್ಯ: ಇಂದು ಸಂಜೆ 5ಕ್ಕೆ ಸಿಎಂ ಯಡಿಯೂರಪ್ಪ ಭಾಷಣ

Spread the love

ಲಾಕ್ಡೌನ್ ಭವಿಷ್ಯ: ಇಂದು ಸಂಜೆ 5ಕ್ಕೆ ಸಿಎಂ ಯಡಿಯೂರಪ್ಪ ಭಾಷಣ

ಬೆಂಗಳೂರು: ಮಾರಕ ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹೇರಲಾಗಿದ್ದ ಲಾಕ್ಡೌನ್ ನಾಳೆ ಬೆಳಗ್ಗೆ ಅಂತ್ಯವಾಗಲಿದ್ದು, ಲಾಕ್ಡೌನ್ ಮುಂದುವರೆಸುವ ಕುರಿತು ಇಂದು ಸಂಜೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಒಂದು ವಾರದ ಲಾಕ್‍ಡೌನ್ ಮುಗಿಯುತ್ತಿದ್ದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯವನ್ನು ಉದ್ದೇಶಿಸಿ ಇಂದು ಸಂಜೆ 5 ಗಂಟೆಗೆ ಭಾಷಣ ಮಾಡಲಿದ್ದಾರೆ. ಸಿಎಂ ಯಡಿಯೂರಪ್ಪ ಅವರು ಇಂದು ಸಂಜೆ 5 ಗಂಟೆಗೆ ಫೇಸ್‍ಬುಕ್ ಮತ್ತು ಯುಟ್ಯೂಬ್ ಮೂಲಕ ಲೈವ್ ಬರಲಿದ್ದು, ಸಿಎಂ ಸುಮಾರು 15 ನಿಮಿಷ ಕಾಲ ಲೈವ್‍ನಲ್ಲಿ ಭಾಷಣ ಮಾಡಲಿದ್ದಾರೆ.

ಈ ಬಗ್ಗೆ ಸ್ವತಃ ಸಿಎಂ ಬಿಎಸ್ ಯಡಿಯೂರಪ್ಪ ಅವರು ಟ್ವೀಟ್ ಮಾಡಿದ್ದು, ಇಂದು ಸಂಜೆ 5 ಗಂಟೆಗೆ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದೇನೆ. ನನ್ನ ಫೇಸ್ ಬುಕ್ ಪೇಜ್ ನಲ್ಲಿ ನೇರ ಪ್ರಸಾರವನ್ನು ವೀಕ್ಷಿಸಿ ಎಂದು ಹೇಳಿದ್ದಾರೆ.

ತಮ್ಮ ಭಾಷಣದಲ್ಲಿ ಸಿಎಂ ಯಡಿಯೂರಪ್ಪ ಅವರು, ಬೆಂಗಳೂರು ಅನ್‍ಲಾಕ್ ಬಗ್ಗೆ ಮಾತನಾಡುವ ಸಾಧ್ಯತೆ ಇದೆ. ಇದಲ್ಲದೆ ಕೊರೋನಾ ಸೋಂಕು ನಿಯಂತ್ರಿಸುವ ಸಂಬಂಧ ಜನತೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಸಿಎಂ ಮಾತನಾಡುವ ಸಾಧ್ಯತೆ ಇದೆ.

ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಗಣನೀಯವಾಗಿ ಹೆಚ್ಚಳವಾದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಒಂದು ವಾರ ಲಾಕ್ಡೌನ್ ಹೇರಿಕೆ ಮಾಡಿತ್ತು. ಬೆಂಗಳೂರು ಬೆನ್ನಲ್ಲೇ ರಾಜ್ಯದ ಇತರೆ ಜಿಲ್ಲೆಗಳೂ ಕೂಡ ಲಾಕ್ಡೌನ್ ಹೇರಿಕೆ ಮಾಡಿದ್ದವು.


Spread the love