ಲೋಕ ಸಭಾ ಚುನಾವಣೆ ನಾಮಪತ್ರ ಸಲ್ಲಿಕೆ ಡಿಸಿ ಕಚೇರಿ: ಭದ್ರತಾ ಸಿದ್ದತೆ ಪರಿಶೀಲನೆ

Spread the love

ಲೋಕ ಸಭಾ ಚುನಾವಣೆ ನಾಮಪತ್ರ ಸಲ್ಲಿಕೆ ಡಿಸಿ ಕಚೇರಿ: ಭದ್ರತಾ ಸಿದ್ದತೆ ಪರಿಶೀಲನೆ

ಉಡುಪಿ: ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಲೋಕ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಬುಧವಾರ ಜಿಲ್ಲಾ ಅಧಿಕಾರಿಗಳ ಕಚೇರಿಯಿಂದ 100 ಮೀ. ವ್ಯಾಪ್ತಿಯೊಳಗಿನ ಪ್ರದೇಶಗಳಿಗೆ ಭೇಟಿ ನೀಡಿ ಭದ್ರತೆ ಹಾಗೂ ಇತರ ಸಿದ್ದತೆಗಳನ್ನು ಪರಿಶೀಲಿಸಿದರು.

ಜಿಲ್ಲಾಧಿಕಾರಿ ಕಚೇರಿಯಿಂದ 100 ಮೀ. ವ್ಯಾಪ್ತಿಯೊಳಗಿನ ಪ್ರದೇಶಗಳಿಗೆ ಯಾವುದೇ ರಾಜಕೀಯ ಪಕ್ಷಗಳು ಅಥವಾ ಅಭ್ಯರ್ಥಿಗಳ ಪರ ಮೆರವಣಿಗೆ ಅಥವಾ ನಾಮ ಪತ್ರ ಸಲ್ಲಿಸಲು ನಿರ್ಭಂದ ಇರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಈ ಪರಿಶೀಲನೆ ನಡೆಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಯೊಂದಿಗೆ ಉಪಸ್ಥಿತರಿದ್ದರು.


Spread the love