Spread the love
ವಂಚನೆ ಪ್ರಕರಣ: ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
ಸುಳ್ಯ: ವಂಚನೆ ಪ್ರಕರಣದಲ್ಲಿ ಸುಮಾರು ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಬೆಂಗಳೂರಿನಿಂದ ಬಂಧಿಸಿದ್ದಾರೆ.

ಕಡೂರು ಗ್ರಾಮದ ನಿವಾಸಿ ನಾಗೇಶ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿಯಾಗಿ, ಸುಮಾರು 4 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಕಡೂರು ಗ್ರಾಮದ ನಿವಾಸಿ ನಾಗೇಶ್ ಎಂಬಾತನನ್ನು, ಸುಳ್ಯ ಪೊಲೀಸ್ ಠಾಣಾ ಸಿಬ್ಬಂದಿಗಳಾದ ರಮೇಶ್ ಹಾಗೂ ಶ್ರೀಶೈಲ ಅವರು ಗುರುವಾರ ಬೆಂಗಳೂರಿನ ಚಿಕ್ಕಬಿದರಿಕಲ್ಲು ಎಂಬಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
Spread the love












