ವಕ್ವಾಡಿ: ತಾಲೂಕು ಮಟ್ಟದ ಬಾಲಕ ಮತ್ತು ಬಾಲಕಿಯರ ಕ್ರೀಡಾಕೂಟಕ್ಕೆ ಚಾಲನೆ

Spread the love

ವಕ್ವಾಡಿ: ತಾಲೂಕು ಮಟ್ಟದ ಬಾಲಕ ಮತ್ತು ಬಾಲಕಿಯರ ಕ್ರೀಡಾಕೂಟಕ್ಕೆ ಚಾಲನೆ

ಕುಂದಾಪುರ: ಶಾಲಾಭಿವೃದ್ದಿ ಸಮಿತಿ, ಕ್ರೀಡಾಕೂಟ ಸಮಿತಿ ಹಾಗೂ ಸ್ಥಳೀಯರ ಸಹಕಾರದಿಂದ ಕಳೆದ ಎರಡು ತಿಂಗಳುಗಳಿಂದ ಭಾರೀ ಶ್ರಮವಹಿಸಿ ಅದ್ಭುತ ಕ್ರೀಡಾಂಗಣವನ್ನು ನಿರ್ಮಿಸಲಾಗಿದೆ. ಎರಡು ದಿನಗಳ ಕಾಲ ನಡೆಯಲಿರುವ ಈ ಕ್ರೀಡಾಕೂಟವನ್ನು ಊರ ಹಬ್ಬದಂತೆ ಆಯೋಜನೆ ಮಾಡಿರುವುದು ಶ್ಲಾಘನೀಯ. ವಕ್ವಾಡಿ ಸರ್ಕಾರಿ ಪ್ರೌಢ ಶಾಲೆಯ ಮುಂದಾಳತ್ವದಲ್ಲಿ ನಡೆಯುತ್ತಿರುವ ತಾಲೂಕು ಮಟ್ಟದ ಬಾಲಕ ಮತ್ತು ಬಾಲಕಿಯರ ಕ್ರೀಡಾಕೂಟವು ಇಡೀ ತಾಲೂಕಿಗೆ ಮಾದರಿ ಕ್ರೀಡಾಕೂಟವಾಗಿ ಹೊರಹೊಮ್ಮಲಿ ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಹೇಳಿದರು.

ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ, ಸರ್ಕಾರಿ ಪ್ರೌಢ ಶಾಲೆ ವಕ್ವಾಡಿ ಇದರ ಆಶ್ರಯದಲ್ಲಿ ಸರ್ಕಾರಿ ಪ್ರೌಢ ಶಾಲೆ ವಕ್ವಾಡಿ ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ತಾಲೂಕು ಮಟ್ಟದ ಬಾಲಕ ಬಾಲಕಿಯರ ಕ್ರೀಡಾಕೂಟವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.
ಕಾಳಾವರ ಗ್ರಾಮ ಪಂಚಾಯತ್ ಅಧ್ಯಕ್ಷ ಮಂಜುನಾಥ್ ಶೆಟ್ಟಿಗಾರ್ ಕ್ರೀಡಾ ಧ್ವಜಾರೋಹಣಗೈದರು. ಬಲೂನು ಹಾರಿಸಿ ಬಿಡುವುದರ ಮೂಲಕ ಉದ್ಯಮಿ ಗಜೇಂದ್ರ ಶೆಟ್ಟಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಉದ್ಯಮಿ ಸಣಗಲ್ಲು ಮನೆ ಪ್ರವೀರ್ ಕುಮಾರ್ ಶೆಟ್ಟಿ ಕ್ರೀಡಾ ಜ್ಯೋತಿ ಬೆಳಗಿಸಿದರು.

ವೇದಿಕೆಯಲ್ಲಿ ಯುವಜನ ಸೇವಾ ಕ್ರೀಡಾಧಿಕಾರಿ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಕುಸುಮಾಕರ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರಾದ ರಮೇಶ್ ಶೆಟ್ಟಿ ವಕ್ವಾಡಿ, ಭಾರತಿ, ರವಿರಾಜ್ ಶೆಟ್ಟಿ, ಎಸ್ ಡಿಎಂ ಸಿ ಅಧ್ಯಕ್ಷ ರಾಜು ಕುಲಾಲ್, ಗೋಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುರೇಶ್ ಶೆಟ್ಟಿ, ಕೆದೂರು ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಕುಮಾರ್ ಶೆಟ್ಟಿ, ಕೆದೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಶಾನಾಡಿ ಸಂಪತ್ ಕುಮಾರ್ ಶೆಟ್ಟಿ, ನರಸಿಂಹ ಪೂಜಾರಿ ವಕ್ವಾಡಿ, ವಕ್ವಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಮಾಲಾಡಿ ರಾಜೀವ್ ಶೆಟ್ಟಿ, ಕ್ರೀಡಾಕೂಟ ಸಮಿತಿಯ ಅಧ್ಯಕ್ಷ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಸಣಗಲ್ ಮನೆ, ಕ್ರೀಡಾಕೂಟದ ಕಾರ್ಯದರ್ಶಿ ಸತೀಶ್ ಪೂಜಾರಿ, ಕ್ರೀಡಾಕೂಟ ಸಮಿತಿಯ ಖಜಾಂಚಿ ವಿ.ಕೆ.ಶೆಟ್ಟಿ, ನಿವೃತ್ತ ಮುಖ್ಯೋಪಾಧ್ಯಾಯ ಕರುಣಾಕರ ಶೆಟ್ಟಿ, ಉದ್ಯಮಿ ಅಶೋಕ್ ಪೂಜಾರಿ, ಸಮಾಜ ಸೇವಕ ಮಲ್ಯಾಡಿ ಶಿವರಾಮ ಶೆಟ್ಟಿ, ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ವಕ್ವಾಡಿ ಬಾಲಕೃಷ್ಣ ಶೆಟ್ಟಿ, ಕಿಶನ್ ರಾಜ್ ಶೆಟ್ಟಿ, ಗಣೇಶ್ ಕುಮಾರ್ ಶೆಟ್ಟಿ, ಉದಯ ಮಡಿವಾಳ, ಶರತ್ ಕುಮಾರ್ ಶೆಟ್ಟಿ, ಚಂದ್ರ ನಾಯಕ್ ಮುಂತಾದವರು ಉಪಸ್ಥಿತರಿದ್ದರು.

ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಚಂದ್ರಶೇಖರ್ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು. ವಕ್ವಾಡಿ ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಸುಜಾತ ಬಿ ವಂದಿಸಿದರು, ಚಾರಿತ್ರ್ಯ ಕ್ರೀಡಾ ಪ್ರತಿಜ್ಞಾವಿಧಿ ಬೋಧಿಸಿದರು.


Spread the love
Subscribe
Notify of

0 Comments
Inline Feedbacks
View all comments