ವಲಸೆ ಕಾರ್ಮಿಕರು ತಮ್ಮೂರಿಗೆ ಮರಳಲು ವ್ಯವಸ್ಥೆ ಮಾಡುವಂತೆ ಡಿಸಿಗಳಿಗೆ ಮುಖ್ಯ ಕಾರ್ಯದರ್ಶಿ ಸೂಚನೆ

Spread the love

ವಲಸೆ ಕಾರ್ಮಿಕರು ತಮ್ಮೂರಿಗೆ ಮರಳಲು ವ್ಯವಸ್ಥೆ ಮಾಡುವಂತೆ ಡಿಸಿಗಳಿಗೆ ಮುಖ್ಯ ಕಾರ್ಯದರ್ಶಿ ಸೂಚನೆ

ಬೆಂಗಳೂರು : ಲಾಕ್ಡೌನ್ ವಿಧಿಸಿದ ನಂತರ ಕೆಲಸಕ್ಕಾಗಿ ಬೇರೆ ಊರಿಗೆ ವಲಸೆ ಬಂದ ಕಾರ್ಮಿಕರು, ಮರಳಿ ಮನೆಗೆ ಹೋಗಲಾರದ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದ್ರೀಗ ವಲಸೆ ಕಾರ್ಮಿಕರಿಗೆ ತಮ್ಮ ತಮ್ಮ ಊರುಗಳಿಗೆ ತೆರಳಲು ಅವಕಾಶ ನೀಡುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಆದೇಶಿಸಿದ್ದಾರೆ.

ವಲಸೆ ಕಾರ್ಮಿಕರನ್ನು ಹಾಗೂ ಕೂಲಿ ಕಾರ್ಮಿಕರನ್ನು ರಾಜ್ಯದೊಳಗೆ ಸ್ಥಳಾಂತರಿಸಲು ಅನುಮತಿ ನೀಡಲಾಗಿದೆ. ಸ್ಟಾಂಡರ್ಡ್ ಆಪರೇಂಟಿಂಗ್ ಪ್ರೋಟೋಕಾಲ್ ಅನ್ವಯ ಕ್ರಮ ಕೈಗೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ವಿಜಯಭಾಸ್ಕರ್ ಸೂಚಿಸಿದ್ದಾರೆ.

ಕೆಎಸ್ಆರ್ಟಿಸಿ ಬಸ್ಗಳನ್ನು ಬಳಸಿಕೊಂಡು ಕಾರ್ಮಿಕರನ್ನು ಅವರ ಊರಿಗೆ ಕರೆದೊಯ್ಯಬಹುದು. ಆದ್ರೆ ಈ ವೇಳೆ ಸಾಮಾಜಿಕ ಅಂತರ ಕಡ್ಡಾಯ. ಪ್ರತೀ ಬಸ್ಗಳಲ್ಲಿ ಶೇಕಡಾ 40 ರಷ್ಟು ಮಾತ್ರ ಭರ್ತಿಯಾಗಬೇಕು. ಅಲ್ಲದೇ ಸ್ಥಳಾಂತರಿಸುವ ವಲಸೆ ಕಾರ್ಮಿಕರಿಗೆ ಹಾಗೂ ಕೂಲಿ ಕಾರ್ಮಿಕರಿಗೆ ಗ್ಲೌಸ್ಗಳನ್ನು ಹಾಗೂ ಮಾಸ್ಕ್ಗಳನ್ನು ನೀಡಬೇಕು. ಈ ಪ್ರಕ್ರಿಯೆ ಕೂಡಲೇ ಆರಂಭಿಸುವಂತೆ ಸೂಚನೆ ನೀಡಲಾಗಿದೆ.

ರಾಜ್ಯದಲ್ಲಿ ಕೃಷಿ ಚಟುವಟಿಕೆ ಹಾಗೂ ಆರ್ಥಿಕ ಚಟುವಟಿಕೆಗಳು ಪುನಾರಂಭಗೊಳ್ಳಲು ಸಹಕಾರಿ ಅನ್ನೋ ಕಾರಣದಿಂದ ವಲಸೆ ಕಾರ್ಮಿಕರನ್ನು ಹಾಗೂ ಕೂಲಿ ಕಾರ್ಮಿಕರನ್ನು ಸ್ಥಳಾಂತರಕ್ಕೆ ಅವಕಾಶ ಮಾಡಿಕೊಡಲಾಗಿದೆ ಎನ್ನಲಾಗಿದೆ.


Spread the love